ದಿವ್ಯ ಜ್ಯೋತಿ ಶಾಲೆಯಲ್ಲಿ ಗರ್ಭಕಂಠ ಕ್ಯಾನ್ಸರ್ ಕುರಿತು ಮಾಹಿತಿ

0

ಕಾಯರ್ತಡ್ಕ : ದಿವ್ಯಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜುಲೈ 22ರಂದು ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ HPU ಲಸಿಕೆ ಹಾಗೂ ಗರ್ಭಕಂಠದ ಕ್ಯಾನ್ಸರ್ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು.

ಸಮುದಾಯ ಆರೋಗ್ಯ ಕೇಂದ್ರ ಅರಸಿನಮಕ್ಕಿ ಇಲ್ಲಿನ ಸಿಬ್ಬಂದಿಗಳಾದ ಸುಜಾತಾ ಹಾಗೂ ರೇಖಾ ಲಸಿಕೆ ಹಾಗೂ ಗರ್ಭಕಂಠದ ಕ್ಯಾನ್ಸರ್ ಕುರಿತು ಮಾಹಿತಿ ನೀಡಿದರು. 9 ಮತ್ತು 10ನೇ ತರಗತಿಯ ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಸಿಸ್ಟರ್ ಲಿಸ್ನಾ ಮ್ಯಾಥ್ಯೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here