






ಬೆಳ್ತಂಗಡಿ: ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಹಕ್ಕುಗಳಿಗಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕೇಂದ್ರ ಸರ್ಕಾರ ಪೊಲೀಸ್ ಬಲ ಪ್ರಯೋಗಿಸಿರುವುದನ್ನು ಖಂಡಿಸಿ ಮತ್ತು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕ ಜು.23 ರಂದು ಮೂರು ಮಾರ್ಗದ ಬಳಿ ಬೃಹತ್ ಪ್ರತಿಭಟನೆ ನಡೆಸಿತು.
ಪ್ರಧಾನ ಭಾಷಣಕಾರರಾಗಿ ಕೆಪಿಸಿಸಿ ವಕ್ತಾರ ಅಮೃತ್ ಶೆಣೈ ಮಾತನಾಡಿ, ಕೇಂದ್ರ ಸರ್ಕಾರ ಮುಗ್ಧ ಜನರ ಜೊತೆ ಚೆಲ್ಲಾಟ ಆಡುತ್ತಿದೆ. ಕಾಂಗ್ರೆಸ್ ನ ಎಲ್ಲಾ ಕೆಲಸಗಳನ್ನು ಬಿಜೆಪಿ ತಾನು ಮಾಡಿದೆ ಎಂದು ಹೇಳುತ್ತಿದೆ.ನೀಟ್ ಸೋರಿಕೆಯಿಂದ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರೂ ಪ್ರಧಾನಿ ಬೇರೆ ದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಮಂತ್ರಿಗಳಿಗೆ ರಾಜೀನಾಮೆ ಕೊಡಿಸುವ ಬದಲು ನೀಟ್ ಅಕ್ರಮದವರಿಗೆ ಕಠಿಣ ಶಿಕ್ಷೆ ಎಂದು ಸತ್ಯಕ್ಕೆ ದೂರವಾಗಿ ಬಿಂಬಿಸುತ್ತಾರೆ. ಪೊಲೀಸರಲ್ಲದ ಸಿಬ್ಬಂದಿಗಳಿಂದ ಮಹಿಳೆಯರ ಮೈಮೇಲೆ ಕೈ ಹಾಕಿ ದೌರ್ಜನ್ಯ ಮಾಡಿರುವುದಕ್ಕೆ ಯಾರು ಹೊಣೆ. ಪ್ರಶ್ನೆ ಪತ್ರಿಕೆಯನ್ನು ರಕ್ಷಣೆ ಮಾಡಲು ಆಗದಿದ್ದರೆ ದೇಶ ಹೇಗೆ ರಕ್ಷಣೆ ಮಾಡುತ್ತಾರೆ. ಬಿಜೆಪಿಯಲ್ಲಿ ಕೇಂದ್ರ ಸರ್ಕಾರದಲ್ಲಿಯೇ ಕಳ್ಳರಿರುವಾಗ ಗ್ರಾಮ ಮಟ್ಟದಲ್ಲಿ ಇರುವುದು ಸಂಶಯವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಗಳು, ಉದ್ಯೋಗಾವಕಾಶಗಳ ಕೊರತೆ ಮತ್ತು ಶಿಕ್ಷಣ ಸಂಸ್ಥೆಗಳ ಖಾಸಗೀಕರಣವನ್ನು ಖಂಡಿಸಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸುವ ಬದಲು ಕೇಂದ್ರ ಸರ್ಕಾರ ಪೊಲೀಸರ ಮೂಲಕ ಲಾಠಿಚಾರ್ಜ್ ನಡೆಸಿತು ಪ್ರತಿವರ್ಷ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆಗುತ್ತಿದೆ ಇದುವೇ ಸಾಧನೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹೇಳಿದರು.


ಬೆಳ್ತಂಗಡಿಯಲ್ಲಿ ಧ್ವನಿ ಎತ್ತಿದ ಯುವ ಕಾಂಗ್ರೆಸ್ರಾಷ್ಟ್ರೀಯ ನಾಯಕರ ಸೂಚನೆಯಂತೆ ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕದ ಕಾರ್ಯಕರ್ತರು ಬೆಳ್ತಂಗಡಿ ಪಟ್ಟಣದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಹಕ್ಕಿಗಾಗಿ ಹೋರಾಡೋಣ – ದಮನಕಾರರ ವಿರುದ್ಧ ಧ್ವನಿಯೆತ್ತೋಣ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಪ್ರತಿಭಟನೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಸಾದ್ ಅವರ ಪ್ರತಿಕೃತಿಯನ್ನು ಸುಟ್ಟು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಕಾಂಗ್ರೆಸ್ ಮುಖಂಡರು, “ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳ ಧ್ವನಿಯನ್ನು ಲಾಠಿಯಿಂದ ಹತ್ತಿಕ್ಕುತ್ತಿದೆ. ರಾಹುಲ್ ಗಾಂಧಿ ಅವರಂತಹ ಜನನಾಯಕನನ್ನು ಬಂಧಿಸುವ ಮೂಲಕ ಸರ್ಕಾರ ತನ್ನ ಸರ್ವಾಧಿಕಾರಿ ಧೋರಣೆಯನ್ನು ತೋರಿಸಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದು ಕೇವಲ ವಿದ್ಯಾರ್ಥಿಗಳ ಸಮಸ್ಯೆಯಲ್ಲ. ಮುಂದಿನ ಪೀಳಿಗೆಯ ಭವಿಷ್ಯದ ಪ್ರಶ್ನೆ. ಉದ್ಯೋಗ, ಶಿಕ್ಷಣ ಮತ್ತು ಸಮಾನ ಅವಕಾಶಗಳಿಗಾಗಿ ನಡೆಯುತ್ತಿರುವ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್‌ನ ನೂರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿದ್ಯಾರ್ಥಿ ವಿರೋಧಿ ನೀತಿಯನ್ನು ಖಂಡಿಸಿದರು.









