







ಬೆಳ್ತಂಗಡಿ, : ಡಿ.ಕೆ.ಆರ್.ಡಿ.ಎಸ್ (ರಿ) ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ಜು. 18 ರಂದು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಜೆ ಸಿ ಅಝಾರ್ ಅಧ್ಯಕ್ಷರು ಯುವ ಕಾಂಗ್ರೆಸ್ ಗ್ರಾಮೀಣ ಘಟಕ ಬೆಳ್ತಂಗಡಿ ಇವರು ಕಾರ್ಯಕ್ರಮಕ್ಕೆ ಆಗಮಿಸಿ, ಪೌಷ್ಟಿಕ ಆಹಾರದ ಕಿಟ್ ವಿತರಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಲಲಿತ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.



ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಆದರ್ಶ್ ಪಿ ಎಸ್ ಪ್ರಾಸ್ತವಿಕ ನುಡಿಯನ್ನು ಆಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಕು. ಶ್ರೇಯ ಪ್ರಾರ್ಥನೆ ಹಾಡಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ವಿದ್ಯಾ ನಿಧಿ ಸಂಯೋಜಕಿ ಜಿನಿ ಪಿ ಜೆ ಸ್ವಾಗತಿಸಿದರು.
ನವ ಜೀವನ ಆರೈಕೆ ಬೆಂಬಲ ಸದಸ್ಯೆ ದೀಕ್ಷಾ ವಂದಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.









