ಸಂಭೋಳ್ಯದ ಸುಮಂತ್ ನಿಗೂಢ ಸಾವಿನ ಪ್ರಕರಣ: ಶಂಕಿತರ ಮತ್ತು ಮನೆಯವರ ಮಂಪರು ಪರೀಕ್ಷೆಗೆ ಸಿದ್ಧತೆ-ಒಪ್ಪಿಗೆ

0

ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಭೋಳ್ಯದ ಬಾಲಕ ಸುಮಂತ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರ ಜೊತೆಗೆ ಸುಮಂತ್ ಅವರ ಮನೆಯವರ ಮಂಪರು ಪರೀಕ್ಷೆ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ಮೃತ ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ಮಾವ ಲಕ್ಷ್ಮೀನಾರಾಯಣ ಮತ್ತು ಸೋದರ ಮಾವ ರಾಧಾಕೃಷ್ಣರವರು ಮಂಪರು ಪರೀಕ್ಷೆಗೆ ಒಳಗಾಗಲು ಒಪ್ಪಿಗೆ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಜ.೧೪ರಂದು ಮುಂಜಾನೆ ಧನುಪೂಜೆಗೆ ತೆರಳಿದ್ದ ಗೇರುಕಟ್ಟೆ ಸಮೀಪದ ಓಡಿಲ್ನಾಳ ಗ್ರಾಮದ ಸಂಭೋಳ್ಯ ನಿವಾಸಿ ಸುಮಂತ್(೧೫) ಅವರ ಸಂಶಯಾಸ್ಪದ ಸಾವಿನ ಪ್ರಕರಣದ ನಿಗೂಢತೆ ಬಯಲಿಗೆಳೆಯಲು ಪೊಲೀಸ್ ಇಲಾಖೆ ಹರಸಾಹಸ ಪಟ್ಟಿದ್ದರೂ ಈ ಕೇಸ್ ನಿಗೂಢವಾಗಿಯೇ ಮುಂದುವರಿದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮಂಪರು ಪರೀಕ್ಷೆಯ ಪ್ರಯೋಗ ನಡೆಸಲು ಮುಂದಾಗಿದೆ.

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ೯ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಪ್ರತಿಭಾನ್ವಿತ ಬಾಲಕ ಸುಮಂತ್ ಅವರನ್ನು ವ್ಯವಸ್ಥಿತವಾಗಿ ಕೊಲೆ ಮಾಡಲಾಗಿದೆ ಎಂಬ ಸಂಶಯದ ಆಧಾರದಲ್ಲಿ ತಂಡ ರಚಿಸಿ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಯಾವುದೇ ಫಲಿತಾಂಶ ದೊರಕದೆ ನಿರಾಶೆಗೊಳಗಾಗಿದ್ದು ಇದೀಗ ಕೊನೇಯ ಅಸ್ತ್ರವಾಗಿ ಶಂಕಿತರನ್ನು ಮಂಪರು ಪರೀಕ್ಷೆ ನಡೆಸಲು ಮುಂದಾಗಿದೆ. ಇದರ ಮೊದಲ ಹಂತವಾಗಿ ಸುಮಂತ್ ಅವರ ತಂದೆ ಸುಬ್ರಹ್ಮಣ್ಯ ನಾಯಕ್, ತಾಯಿ ರತ್ನಾವತಿ, ಸಹೋದರ ಸುದರ್ಶನ್, ಮಾವ ಲಕ್ಷ್ಮೀನಾರಾಯಣ ಮತ್ತು ಸೋದರ ಮಾವ ರಾಧಾಕೃಷ್ಣರವರನ್ನು ಮಂಪರು ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿರುವ ಸರ್ಕಲ್ ಇನ್ಸ್‌ಪೆಕ್ಟರ್ ರವಿ ಬಿ.ಎಸ್. ಅವರು ಮಂಪರು ಪರೀಕ್ಷೆಗೆ ಒಳಪಡಿಸಲು ಕೋರ್ಟ್ ಮೆಟ್ಟಿಲೇರಿದ್ದಾರೆ. ಇದಕ್ಕೆ ಪೂರಕವಾಗಿ ಸುಮಂತ್ ಮನೆಯವರು ಮಂಪರು ಪರೀಕ್ಷಗೆ ಒಳಗಾಗಲು ಒಪ್ಪಿಗೆ ಸೂಚಿಸಿದ್ದಾರೆ. ಆನಂತರ ಶಂಕಿತರ ಮಂಪರು ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ಐವರು ಒಪ್ಪಿಗೆ ಸೂಚಿಸಿದ್ದೇವೆ: ಸುಮಂತ್ ಸಾವಿಗೀಡಾಗಿ ಆರು ತಿಂಗಳು ಕಳೆದಿವೆ. ನಾವು ತನಿಖಾಧಿಕಾರಿ ರವಿ ಬಿ.ಎಸ್. ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿzವೆ. ಶಂಕಿತರನ್ನು ಬ್ರೈನ್‌ಮ್ಯಾಪಿಂಗ್ ಮಾಡಲಿದ್ದಾರೆ. ಅದಕ್ಕೂ ಮೊದಲು ಕುಟುಂಬದವರನ್ನು ಬ್ರೈನ್ ಮ್ಯಾಪಿಂಗ್ ಮಾಡಿದರೆ ಉಳಿದವರು ಪ್ರಶ್ನಿಸುವುದಿಲ್ಲ ಎಂದು ಹೇಳಿದ್ದಾರೆ. ನಾವು ಅವರ ಮಾತಿಗೆ ಒಪ್ಪಿ ಐವರು ಒಪ್ಪಿಗೆ ಸೂಚಿಸಿzವೆ. ನಮ್ಮದಾದ ಕೂಡಲೇ ಉಳಿದವರನ್ನು ಮಂಪರು ಪರೀಕ್ಷೆ ಮಾಡಬೇಕು ಎಂದು ಬೇಡಿಕೆಯಿಟ್ಟಿzವೆ. ರವಿ ಅವರ ಮೇಲೆ ಮತ್ತು ಅವರ ತನಿಖೆಯ ಮೇಲೆ ನಂಬಿಕೆಯಿದೆ. -ಸುಬ್ರಹ್ಮಣ್ಯ ನಾಯಕ್,ಸುಮಂತ್ ತಂದೆ

LEAVE A REPLY

Please enter your comment!
Please enter your name here