ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಉಚಿತ ಉದ್ಯೋಗ ಮಾರ್ಗದರ್ಶನ ಹಾಗೂ ಸಂದರ್ಶನ ತರಬೇತಿ ಕಾರ್ಯಗಾರ: ವಿವೇಕ್ ಆಳ್ವ ಭಾಗಿ:ಉದ್ಯೋಗ ಕುರಿತು ವಿಶೇಷ ಉಪನ್ಯಾಸ

0

ಬೆಳ್ತಂಗಡಿ:ಗ್ರಾಮೀಣ ಭಾಗದ ಯುವಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಅರಿವು ಮೂಡಿಸಿ, ಉದ್ಯೋಗ ಪಡೆಯಲು ಅಗತ್ಯ ತರಬೇತಿ ನೀಡುವ ಉದ್ದೇಶದಿಂದ ಶ್ರಮಿಕ ಸಂಸ್ಥೆ ಮತ್ತು ಆಳ್ವಾಸ್ ಎಜುಕೇಷನ್ ಫೌಂಡೇಷನ್ ಜಂಟಿಯಾಗಿ ಉಚಿತ ಉದ್ಯೋಗ ಮಾರ್ಗದರ್ಶನ ಮತ್ತು ಸಂದರ್ಶನ ತರಬೇತಿ ಕಾರ್ಯಾಗಾರವನ್ನು ಜು. 25 ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಕಲಾಭವನದಲ್ಲಿ ನಡೆಯಿತು.

ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿ ಯುವಕರಿಗೆ ಸ್ಪೂರ್ತಿ ಮತ್ತು ಮಾರ್ಗದರ್ಶನ ನೀಡಿದರು.ಈ ಕಾರ್ಯಾಗಾರದಲ್ಲಿ ನಿರುದ್ಯೋಗಿ ಪದವೀಧರರು ಮತ್ತು 12ನೇ ತರಗತಿ, ಡಿಪ್ಲೋಮಾ ಪಾಸಾದ ಮತ್ತು ಕಾಲೇಜು ಯುವಕ ಯುವತಿಯರು ಭಾಗವಹಿಸಿದ್ದರು. ಪ್ರಸ್ತುತ ಮಾರುಕಟ್ಟೆಯಲ್ಲಿ ಯಾವ ಕ್ಷೇತ್ರಗಳಲ್ಲಿ ಉದ್ಯೋಗ ಅವಕಾಶಗಳಿವೆ, ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಿಗೆ ಹೇಗೆ ತಯಾರಿ ನಡೆಸಬೇಕು ಎಂಬ ಬಗ್ಗೆ ಮಾಹಿತಿ ನೀಡಿದರು.

ಇಂಟರ್ವ್ಯೂನಲ್ಲಿ ಕೇಳುವ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬ ಮಾರ್ಗದರ್ಶನ ನೀಡಿದರು. ಸುದ್ದಿ ಸಮೂಹ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಪಿ. ಶಿವಾನಂದ್, ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here