ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

0

ವೇಣೂರು: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಕುಲಶೇಖರ, ಮಂಗಳೂರು 2025-2026ನೇ ಸಾಲಿನ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಘೋಷಿಸಿದೆ. ತಾಲೂಕಿನ ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿಗೆ ಭಾಜನವಾಗಿದೆ.

ಸಂಘದ ಅಧ್ಯಕ್ಷ ಪಿ. ರಮೇಶ್ ಪೂಜಾರಿ ಪಡ್ಡಾಯಿಮಜಲು ಹಾಗೂ ಕಾರ್ಯನಿರ್ವಹಣಾಧಿಕಾರಿ ರಾಜು ಪೂಜಾರಿ ಅವರು ಒಕ್ಕೂಟದಿಂದ ಪ್ರಶಸ್ತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ದ. ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಉಪಾಧ್ಯಕ್ಷ ಜಯ ಕುಮಾರ್ ಮತ್ತು ಆಡಳಿತ ಮಂಡಳಿ ಸದಸ್ಯರು, ವ್ಯವಸ್ಥಾಪಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here