ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ಶಿಶಿಲದ ಜಯರಾಮ ನೆಲ್ಲಿತ್ತಾಯ ನೇಮಕ

0

ಶಿಶಿಲ, ಜು. 28: ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಬೈಠಕ್–2 ಸಭೆಯು ಬೆಂಗಳೂರಿನ ವಿಜಯಪುರದಲ್ಲಿ ನಡೆಯಿತು.

ಸಭೆಯಲ್ಲಿ ಸಂಘಟನೆಯ ವಿವಿಧ ಹಂತಗಳ ಜವಾಬ್ದಾರಿಗಳನ್ನು ಘೋಷಿಸಲಾಯಿತು.ಈ ಸಂದರ್ಭದಲ್ಲಿ ಶಿಶಿಲದ ಬಿ. ಜಯರಾಮ ನೆಲ್ಲಿತ್ತಾಯ ಅವರನ್ನು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮ ಪ್ರಸಾರ ಸಂತ ಪ್ರಮುಖ್ ಆಗಿ ನೇಮಕ ಮಾಡಿ ಜವಾಬ್ದಾರಿ ವಹಿಸಲಾಯಿತು.

ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಜಯರಾಮ ನೆಲ್ಲಿತ್ತಾಯ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಸ್ಥಳೀಯರಿಗೆ ಸಂತಸ ತಂದಿದೆ.

ಅವರ ನೇಮಕಾತಿಯನ್ನು ವಿಶ್ವಹಿಂದೂ ಪರಿಷತ್‌ನ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದ್ದು, ನೂತನ ಜವಾಬ್ದಾರಿಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here