ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕೆನರಾ ಬ್ಯಾಂಕ್ ಹಿರಿಯ ಅಧಿಕಾರಿಗಳ ಭೇಟಿ

0

ಸೌತಡ್ಕ: ಕೆನರಾ ಬ್ಯಾಂಕ್‌ನ ಸಹಾಯಕ ಮಹಾಪ್ರಬಂಧಕರಾದ ಅಳವಾಲ ವೀರಾಂಜನೇಯಲು ಹಾಗೂ ಪುತ್ತೂರು ವಿಭಾಗದ ಡಿಜಿಎಂ ಹರಿಪ್ರಸಾದ ಎನ್. ಎಸ್. ಅವರು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರು ಅಧಿಕಾರಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು. ದೇವಳದ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.

ದೇವಸ್ಥಾನದ ಕೆನರಾ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಎಲ್ಲ ವ್ಯವಹಾರಗಳನ್ನು ಗ್ರಾಹಕ ಸ್ನೇಹಿ ರೀತಿಯಲ್ಲಿ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಅಲ್ಲದೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸೇವಾ ವ್ಯವಹಾರಗಳನ್ನು ಮತ್ತಷ್ಟು ಸುಲಭ ಹಾಗೂ ವೇಗವಾಗಿ ನಡೆಸಲು ಅತ್ಯಾಧುನಿಕ ಸ್ವಯಂಚಾಲಿತ ಬಿಲ್ಲಿಂಗ್ ಯಂತ್ರವನ್ನು ಒದಗಿಸುವುದಾಗಿ ತಿಳಿಸಿದರು. ನೆಲ್ಯಾಡಿ ಕೆನರಾ ಬ್ಯಾಂಕ್ ಶಾಖೆಯ ಪ್ರಬಂಧಕರಾದ ನೀರಜಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here