






ಉರುವಾಲು: ಪುಂಜಾಲಕಟ್ಟೆ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ಜು.30ರಂದು ಸೇಕ್ರೆಡ್ ಹಾರ್ಟ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.


ವಿಜೇತ ತಂಡದಲ್ಲಿ 7ನೇ ತರಗತಿಯ ದಿಶಾನ್ ರೈ, ಸನ್ವಿತ್ ಹಾಗೂ ನಿಶಿತ್ ಭಾಗವಹಿಸಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸೇವಾ ಸಮಿತಿಯ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ತಾಲೂಕು ಮಟ್ಟದ ಸ್ಪರ್ಧೆಗೆ ಶುಭ ಹಾರೈಸಿದರು.









