ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಸಾಧನೆ

0

ಉಜಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬೆಳ್ತಂಗಡಿ ಹಾಗೂ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳ ಇವರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಬಹುಮಾನಗಳನ್ನು ಪಡೆದಿದ್ದಾರೆ.

ಪ್ರಾಥಮಿಕ ವಿಭಾಗದ ಬಾಲಕರ ತಂಡದಲ್ಲಿ ಗೌತಮ್, ಅಮೋಘ್ ಹಾಗೂ ಮಹಮ್ಮದ್ ನಿಜಾಮ್ ಅವರು ದ್ವಿತೀಯ ಸ್ಥಾನವನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಪ್ರೌಢಶಾಲಾ ವಿಭಾಗದ ಆಯ್ಕೆ ಪ್ರಕ್ರಿಯೆಯಲ್ಲಿ ಎಂಟನೇ ತರಗತಿಯ ಪ್ರಣವ ಜೋಯಿಶ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡದಲ್ಲಿ ಆದ್ಯ ರೈ, ದೃಶಾ ಮರಿಯಾ ಹಾಗೂ ಶ್ರಾವಣಿ ಅವರು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಆದ್ಯ ರೈ ಅವರು ಉತ್ತಮ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ.

ಇದೇ ವೇಳೆ, ಎಂಟನೇ ತರಗತಿಯ ಸನ್ನಿಧಿ ಹಾಗೂ ಅನಘಾ ಮೇರಿ ಅವರು ಆಯ್ಕೆ ಪ್ರಕ್ರಿಯೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್ ಅವರು ಸೂಕ್ತ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ್ದು, ಶಾಲೆಯ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ. ಅವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here