ವೇಣೂರು ಸರಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳು ಪೊಲೀಸ್ ಠಾಣೆಗೆ ಸೌಹಾರ್ದ ಭೇಟಿ

0

ವೇಣೂರು : ವೇಣೂರು ಸರಕಾರಿ ಪ್ರೌಢ ಶಾಲೆಯ ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡರು.

ಠಾಣೆಯ ಉಪನಿರೀಕ್ಷಕಿ ಓಮನ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳಿಗೆ ಠಾಣೆಯ ಕರ್ತವ್ಯಗಳು ಹಾಗೂ ವಿವಿಧ ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾಲೇಜು ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ರವೀಂದ್ರ ಕೆ., ಶಿಕ್ಷಕಿ ಸುಪ್ರೀತಾ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here