







ಬಂದಾರು : ಪೆರ್ಲ ಬೈಪಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸಿ ಸೇವಾ ನಿವೃತ್ತಿ ಹೊಂದಿದ ಜಯಶ್ರೀ ಕೆ. ಇವರಿಗೆ ಬೀಳ್ಕೊಡುಗೆ ಸಮಾರಂಭವು ಆ. 1ರಂದು ಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ದಾಮೋದರ ಗೌಡ ಕಾಡಂಡ ವಹಿಸಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಶ್ರೀನಿವಾಸ ಗೌಡ ಬಾಲಂಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು.39 ವರ್ಷಗಳ ಸೇವೆ ಜಯಶ್ರೀ ಕೆ.ಅವರು ಸುಮಾರು 39 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಂಗನವಾಡಿ, ಪೆರ್ಲ ಬೈಪಾಡಿ, ಬಂದಾರು, ಕುಂಟಾಲಪಲ್ಕೆ , ಬಜಿಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸೇವೆ ಸಲ್ಲಿಸಿ ಮುಖ್ಯೋಪಾಧ್ಯಾಯಿನಿಯಾಗಿ ಬಡ್ತಿ ಹೊಂದಿ ಪೆರ್ಲ ಬೈಪಾಡಿ ಶಾಲೆಗೆ ವರ್ಗಾವಣೆಯಾಗಿ ಬಂದಿದ್ದರು. ಜು. 31ರಂದು ಅವರು ಸೇವಾನಿವೃತ್ತಿ ಹೊಂದಿದರು.


ಅವರು ತಮ್ಮ 39 ವರ್ಷಗಳ ಶೈಕ್ಷಣಿಕ ಅನುಭವವನ್ನು ಹಂಚಿಕೊಂಡು ಮಕ್ಕಳಿಗೆ ಹಿತವಚನ ನೀಡಿದರು. ಪೋಷಕರು, ಶಿಕ್ಷಕರು ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ವಿವಿಧ ಕ್ಲಸ್ಟರ್ ಶಾಲಾ ವಿದ್ಯಾರ್ಥಿಗಳು ಶಿಕ್ಷಕರು, ಊರಿನ ಗಣ್ಯರು, ಸಂಘಟಕರು ಮತ್ತು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದು ನಿವೃತ್ತರನ್ನು ಹಾಗೂ ಪತಿ ಹೊನ್ನಪ್ಪ ಗೌಡ ಸಹಿತ ಸನ್ಮಾನಿಸಿದರು. ವಿದ್ಯಾರ್ಥಿಗಳ ಪ್ರಾರ್ಥನೆಯಿಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡು ಶಾಲಾ ಸಹ ಶಿಕ್ಷಕ ಬಿ.ಡಿ. ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕಿಯರಾದ ನಳಿನಿ ಸ್ವಾಗತಿಸಿ ದೀಕ್ಷಾ ಧನ್ಯವಾದ ಸಮರ್ಪಿಸಿದರು.









