







ಇಂದಬೆಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ವಾರ್ಷಿಕ ಸಾಮಾನ್ಯ ಸಭೆಯು ಜು.23 ರಂದು ಗುರುವಾರದಂದು ಇಂದಬೆಟ್ಟು ಚರ್ಚ್ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಭೆಯಲ್ಲಿ ಸಂಘದ ಅಭಿವೃದ್ಧಿಗೆ ಸುದೀರ್ಘ ಅವಧಿಯವರೆಗೆ ನಿರ್ದೇಶಕರಾಗಿ ಮತ್ತು ಅಧ್ಯಕ್ಷರಾಗಿ ಸೇವೆಯನ್ನು ಸಲ್ಲಿಸಿರುವ ಶ್ರೀಮತಿ ಪಾರ್ವತಿ ಲಕ್ಷ್ಮಣಗೌಡ ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಿ, ಅಭಿನಂದನಾ ಪತ್ರವನ್ನು ಸಮರ್ಪಿಸಲಾಯಿತು.


ಇವರು ಸಂಘದ ಸ್ಥಾಪಕ ಆಡಳಿತ ಮಂಡಳಿಯ ನಿರ್ದೇಶಕರಾಗಿ, ಬಳಿಕ ಅಧ್ಯಕ್ಷರಾಗಿ ಸುದೀರ್ಘ 19 ವರ್ಷಗಳ ಕಾಲ ಸಂಘವನ್ನು ಮುನ್ನಡೆಸಿ, ಯಶಸ್ಸಿನ ಹಾದಿಯಲ್ಲಿ ಕೊಂಡೊಯ್ದಿದ್ದಾರೆ.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ರೇಣುಕಾ ವಸಂತಗೌಡ, ಉಪಾಧ್ಯಕ್ಷರಾದ ಸುರೇಖಾ ನವಿನ್ ಜೈನ್, ಕಾರ್ಯದರ್ಶಿ ವೀಣಾ, ಹಾಗೆಯೇ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಸಿಬ್ಬಂದಿ ವರ್ಗದವರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.









