ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ 60 ದಿನಗಳಲ್ಲಿ ಆಕ್ಷೇಪಣೆ, ಸಲಹೆ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ

0

ಬೆಳ್ತಂಗಡಿ: ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು ಜುಲೈ 27ರಂದು ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶಗಳ ಕರಡು ಅಧಿಸೂಚನೆಯನ್ನು ಹೊರಡಿಸಿದೆ.

ಈ ಕರಡು ಅಧಿಸೂಚನೆಯ ಬಗ್ಗೆ ತಾಲೂಕಿನ ಗ್ರಾಮಗಳ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಬಹುದು.

ಅಧಿಸೂಚನೆ ಹೊರಡಿಸಿದ ದಿನದಿಂದ 60 ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 25, 2026 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬೇಕು.

ಆಕ್ಷೇಪಣೆ ಸಲ್ಲಿಸುವ ವಿಳಾಸ:ಕಾರ್ಯದರ್ಶಿಗಳು, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇಂದಿರಾ ಪರಿಸರ ಭವನ, ಜೋರ್‌ಬಾಗ್, ದೆಹಲಿ – ಇ-ಮೇಲ್:[email protected]ಆದ್ದರಿಂದ ಸಾರ್ವಜನಿಕರು, ರೈತರು, ಜನಪ್ರತಿನಿಧಿಗಳು ಮತ್ತು ಸಂಘ-ಸಂಸ್ಥೆಗಳು ಕರಡು ಅಧಿಸೂಚನೆಯ ಬಗ್ಗೆ ಯಾವುದೇ ಅಭಿಪ್ರಾಯವಿದ್ದಲ್ಲಿ ನಿಗದಿತ ದಿನಾಂಕದೊಳಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸುವಂತೆ ಕೋರಲಾಗಿದೆ.

LEAVE A REPLY

Please enter your comment!
Please enter your name here