ಉಜಿರೆ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

0

ಉಜಿರೆ, ಆ. 6 ರಂದು ಮಂಗಳೂರಿನ ಕೆನರ ಪ್ರೌಢಶಾಲೆಯಲ್ಲಿ “ಕಾನ್ ಮಂಥನ 2026” ಎಂಬ ಶೀರ್ಷಿಕೆಯಲ್ಲಿ ನಡೆದ ಐಕ್ಸ್ (Association of ICSE and CBSE Schools) ಅಂತರ ಶಾಲಾ ಜಿಲ್ಲಾ ಮಟ್ಟದ ಸಾಹಿತ್ಯ ಸ್ಪರ್ಧೆಯಲ್ಲಿ ಉಜಿರೆಯ ಎಸ್.ಡಿ.ಎಮ್. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.

ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಡೆದ ಕನ್ನಡ ನಿರೂಪಣಾ ಚತುರ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಾದ ಅನ್ವಿ ಮತ್ತು ಶಾರ್ವಿ ರೈ ಪ್ರಥಮ ಸ್ಥಾನ ಪಡೆದರು.ಪ್ರೌಢಶಾಲಾ ವಿಭಾಗದಲ್ಲಿ ನಡೆದ “ಸುಳಿವು ಕಂಡುಹಿಡಿಯಿರಿ” ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಪೃಥ್ವಿ ಎಸ್. ಶೆಟ್ಟಿ ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕ ವೃಂದವು ಅಭಿನಂದಿಸಿ, ಮುಂದಿನ ಸ್ಪರ್ಧೆಗಳಲ್ಲಿಯೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here