ಬೆಳ್ತಂಗಡಿ ವಲಯ SKPA 25ನೇ ವರ್ಷದ ರಜತ ಸಂಭ್ರಮ: ಲೋಗೋ ಬಿಡುಗಡೆ ಮೂಲಕ ಚಾಲನೆ

0

ಕುವೆಟ್ಟು: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ, ಬೆಳ್ತಂಗಡಿ ವಲಯಕ್ಕೆ 25ನೇ ವರ್ಷದ ರಜತ ಸಂಭ್ರಮದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭ ಅ4 ರoದು ಗುರುವಾಯನಕೆರೆ ಛಾಯಾಭವನದಲ್ಲಿ ಸoಭ್ರಮದ ಲೋಗೋ ಬಿಡುಗಡೆ ಮಾಡುವ ಮೂಲಕ ಒoದು ವರ್ಷದ ಕಾರ್ಯಕ್ರಮಕ್ಕೆ ಎಸ್ ಕೆ ಪಿ ಎ ದ ಕ ಉಡುಪಿ ಜಿಲ್ಲಾ ಛಾಯಾಗ್ರಾಹಕ ಸoಘದ ಅಧ್ಯಕ್ಷರಾದ ನವೀನ್ ರೈ ಪoಜಳ ಚಾಲನೆ ನೀಡಿದರು.

ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜೆಯ್ ಮoಗಳೂರು, ಉಪಾಧ್ಯಕ್ಷರಾದ ದೇವರಾಜ್ ಶೆಟ್ಟಿ ಸುರತ್ಕಲ್, ವಲಯದ ಗೌರವಾಧ್ಯಕ್ಷ ವಿಲ್ಸನ್ ಗೋನ್ಸಾಲಿಸ್ ಬೆಳ್ತಂಗಡಿ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ ಸುವರ್ಣ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುoಜ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್, ಹರ್ಷ ಬಳ್ಳಮoಜ, ಎಸ್ ಕೆ ಪಿ ಎ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಭಾರದ್ವಾಜ್, ಜಿಲ್ಲಾ ಕಟ್ಟಡ ಸಮಿತಿ ಸದಸ್ಯ ಕೆ ವಸoತ್ ಶರ್ಮಾ ಉಜಿರೆ, ವಲಯದ ಗೌರವ ಸಲಹೆಗಾರರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಮುoದಿನ ದಿನಗಳಲ್ಲಿ ನಡೆಯುವ ಕಾರ್ಯಕ್ರಮದ ಬಗ್ಗೆ ಸದಸ್ಯರೀಗೆ ಮಾಹಿತಿ ನೀಡಲಾಯಿತು.

LEAVE A REPLY

Please enter your comment!
Please enter your name here