ಪ್ರಚೋದನಾಕಾರಿ ಭಾಷಣ ಪ್ರಕರಣ: ಎಸ್‌ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟಗೆ ಶಿಕ್ಷೆ ವಿಧಿಸಿದ ಬೆಳ್ತಂಗಡಿ ನ್ಯಾಯಾಲಯ

0

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಮಾಡಿದ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಬೆಳ್ತಂಗಡಿ ನ್ಯಾಯಾಲಯ ಎಸ್‌ಡಿಪಿಐ ಮುಖಂಡ ರಿಯಾರh ಫರಂಗಿಪೇಟೆಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ೨೦೨೫ರ ಜು.೨೩ರಂದು ಬೆಳ್ತಂಗಡಿ ತಾಲೂಕು ಕಚೇರಿ ಬಳಿ ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಆರೋಪದಲ್ಲಿ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: ೩೧೫/೨೦೧೫ರಂತೆ ಕಲಂ ೧೫೩(ಂ)೨೯೫(ಂ) ಭಾ.ದಂ.ಸಂಹಿತೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾಗಿದ್ದು ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೊಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ನಡೆದು ರಿಯಾರh ಫರಂಗಿಪೇಟೆ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ ೧೫೩ ಅಡಿಯಲ್ಲಿ ೬ ತಿಂಗಳ ಸಾದಾ ಕಾರಗೃಹ ವಾಸ ಮತ್ತು ೧೦,೦೦೦ ದಂಡ ವಿಧಿಸಿ ಅದೇಶಿಸಿದ್ದಾರೆ. ಪ್ರಾಸಿಕ್ಯೂಶನ್ ಪರ ಸಹಾಯಕ ಸರಕಾರಿ ಅಭಿಯೋಜಕಿ ಆಶಿತ ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here