






ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಜನಪ್ರಿಯ ಶಾಸಕ ಹರೀಶ್ ಪೂಂಜಾ ಅವರನ್ನು ಮಡಿವಾಳ ಸಮಾಜ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.


ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ‘ಕರ್ನಾಟಕ ಟಿವಿ’ (Karnataka TV) ಯು ಶಾಸಕ ಹರೀಶ್ ಪೂಂಜಾ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಕೈಗೊಂಡ ಜನಸ್ನೇಹಿ ಕಾರ್ಯಕ್ರಮಗಳನ್ನು ಗುರುತಿಸಿ, ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ ‘ಬೆಸ್ಟ್ ಎಂಎಲ್‌ಎ’ (BEST MLA) ಪ್ರಶಸ್ತಿ ನೀಡಿ ಗೌರವಿಸಿತ್ತು.









