






ನಾರವಿ: ನಾರಾವಿಯಿಂದ ಮೂಡಬಿದ್ರೆ ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ ಹಾಗೂ ನಾರಾವಿಯಿಂದ ಬಂದೋಟ್ಟು ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಆ.10 ರಂದು ಬಂದೋಟ್ಟು ಎಂಬಲ್ಲಿ ನಡೆದಿದೆ.



ಅಪಘಾತದಲ್ಲಿ ಗಾಯಗೊಂಡ ರಿಕ್ಷಾ ಚಾಲಕ ಸುಧಾಕರ ಅವರನ್ನು ಕೂಡಲೇ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.









