






ಉಪ್ಪಿನಂಗಡಿ: ಉಪ್ಪಿನಂಗಡಿಯ ಕೂಟೇಲು-ಸುಬ್ರಹ್ಮಣ್ಯ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಅವ್ಯವಸ್ಥೆ ಮತ್ತು ಗೊಂದಲದ ಕುರಿತು ಸ್ಥಳೀಯರಿಂದ ಲೋಕಸಭಾ ಸದಸ್ಯರಾದ ಕ್ಯಾ. ಬ್ರಿಜೇಶ್ ಚೌಟ ಅವರ ಗಮನಕ್ಕೆ ತರಲಾಗಿದ್ದು, ಸಂಸದರ ತಕ್ಷಣದ ಸ್ಪಂದನೆಯಿಂದ ಸಮಸ್ಯೆಗೆ ಪರಿಹಾರ ದೊರೆಯುವ ಭರವಸೆ ಮೂಡಿದೆ.
ಸಮಸ್ಯೆಯ ಬಗ್ಗೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸಂಸದರು, ಸಂಬಂಧಪಟ್ಟ ಇಂಜಿನಿಯರ್ ಹಾಗೂ ಪ್ರಸನ್ನ ದರ್ಬೆ ಅವರನ್ನು ತಕ್ಷಣವೇ ಸ್ಥಳಕ್ಕೆ ಕಳುಹಿಸಿಕೊಟ್ಟರು. ಅದರಂತೆ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಇಂಜಿನಿಯರ್, ರಸ್ತೆಯ ಸಮಸ್ಯೆಯ ಸಂಪೂರ್ಣ ವಿವರಗಳನ್ನು ಪಡೆದುಕೊಂಡರು. ಅಲ್ಲದೆ, ಈ ಬಗ್ಗೆ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಶೀಘ್ರದಲ್ಲೇ ರಸ್ತೆ ಸಮಸ್ಯೆಯನ್ನು ಬಗೆಹರಿಸಿ ರಸ್ತೆ ಅಗಲೀಕರಣಗೊಳಿಸುವುದಾಗಿ ಸ್ಥಳೀಯ ನಾಗರಿಕರಿಗೆ ಭರವಸೆ ನೀಡಿದರು.


ನಾಗರಿಕರಿಂದ ಕೃತಜ್ಞತೆಸಮಸ್ಯೆ ಉಂಟಾದ ತಕ್ಷಣವೇ ಸ್ಪಂದಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸಲು ಮುಂದಾದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕ್ರಿಯಾಶೀಲ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಸ್ಥಳೀಯ ನಾಗರಿಕರು ಹಾಗೂ ಸಾರ್ವಜನಿಕರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
ಬಿಜೆಪಿ ಉಪ್ಪಿನಂಗಡಿ ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಸುರೇಶ್ ಅತ್ರಮಜಲ್, ಪುತ್ತೂರು ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆದೇಶ ಶೆಟ್ಟಿ, ಹಿರಿಯರಾದ ಜಯಂತ್ ಪುರೋಲಿಸ್ಥಳೀಯರಾದ ಪ್ರತಾಪ್ ಪೆರಿಯಡ್ಕ, ಧರ್ಮಪ್ಪ ನಾಯ್ಕ, ಸುಚಿತ್, ಉದಿತ್ ರಂಗಜೆ, ಗಿರೀಶ್, ಪ್ರಶಾಂತ್ ರಾಮಕುಂಜ, ನವೀನ್, ಹರೀಶ್ ಪಟ್ಲ ಉಪಸ್ಥಿತರಿದ್ದರು.









