ಮುಳಿಯ ಪ್ರತಿಷ್ಠಾನದಿಂದ ‘ಧನಾತ್ಮಕ ಪೋಷಕತ್ವ’ ಆನ್‌ಲೈನ್ ಕಾರ್ಯಕ್ರಮ

0

ಬೆಳ್ತಂಗಡಿ: ಮುಳಿಯ ಫೌಂಡೇಶನ್ ಹಾಗೂ ಮುಳಿಯ ಗೋಲ್ಡ್ & ಡೈಮಂಡ್ಸ್ ಸಹಯೋಗದಲ್ಲಿ ಬೆಂಗಳೂರಿನ 81ಕ್ಕೂ ಹೆಚ್ಚು ಶಾಲೆಗಳಲ್ಲಿ ಆಯೋಜಿಸಲಾಗುತ್ತಿರುವ ‘ಧನಾತ್ಮಕ ಪೋಷಕತ್ವ’ ವಿಚಾರಸಂಕಿರಣ ಸರಣಿಯ ಉದ್ಘಾಟನಾ ಕಾರ್ಯಕ್ರಮವು ಆ.13 ರಂದು ಸಂಜೆ 6.15 zoom ಆನ್‌ಲೈನ್ ಮೂಲಕ ನಡೆಯಲಿದೆ.

ಪೋಷಕರು ಮತ್ತು ಮಕ್ಕಳನ್ನು ತಲುಪುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಈ ವಿಶೇಷ ಕಾರ್ಯಕ್ರಮದಲ್ಲಿ ಖ್ಯಾತ ನಟ, ಚಿಂತಕ ಹಾಗೂ ಪ್ರೇರಣಾದಾಯಕ ಮಾತುಗಾರ ರಮೇಶ್ ಅರವಿಂದ್ ಭಾಗವಹಿಸಿ, ಮಕ್ಕಳ ಬೆಳವಣಿಗೆ, ಪೋಷಕರ ಜವಾಬ್ದಾರಿ ಹಾಗೂ ಮಕ್ಕಳೊಂದಿಗೆ ಸಕಾರಾತ್ಮಕ ಸಂಬಂಧ ಬೆಳೆಸುವ ಕುರಿತು ಉಪಯುಕ್ತ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರು ಮುಂಗಡವಾಗಿ ನೋಂದಾಯಿಸಿಕೊಳ್ಳಬಹುದು. ನೋಂದಣಿಗಾಗಿ ಕೆಳಗಿನ Zoom ಲಿಂಕ್ ಬಳಸಬಹುದು https://us06web.zoom.us/meeting/register/9zA1g1FaT2mZ_JB1

ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಶ್ನೆಗಳಿದ್ದಲ್ಲಿ, ತಮ್ಮ ಹೆಸರು ಹಾಗೂ ಇತರ ಅಗತ್ಯ ಮಾಹಿತಿಯೊಂದಿಗೆ 8123643916 ಸಂಖ್ಯೆಗೆ WhatsApp ಮೂಲಕ ಕಳುಹಿಸಬಹುದು.

ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಮುಳಿಯ ಜ್ಯುವೆಲ್ಸ್‌ನ ಅಧಿಕೃತ YouTube ಚಾನೆಲ್‌ನಲ್ಲಿಯೂ ಅವಕಾಶ ಕಲ್ಪಿಸಲಾಗಿದೆ https://www.youtube.com/@muliyajewels/streamsಪೋಷಕರಲ್ಲಿ ಮಕ್ಕಳೊಂದಿಗೆ ಉತ್ತಮ ಸಂವಹನ, ಅರ್ಥಪೂರ್ಣ ಸಂಬಂಧ ಹಾಗೂ ಸಕಾರಾತ್ಮಕ ಪೋಷಕತ್ವದ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಈ ವಿಚಾರಸಂಕಿರಣ ಸರಣಿಯನ್ನು ಆಯೋಜಿಸಲಾಗಿದೆ ಎಂದು ಕೇಶವ ಪ್ರಸಾದ್ ಮುಳಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here