






ಅಳದಂಗಡಿ: ಇಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಆ.11ರಂದು ಅಳದಂಗಡಿ ಶೌರ್ಯ ತಂಡದ ವತಿಯಿಂದ ಶಾಲಾ ಆವರಣದಲ್ಲಿ ಶ್ರಮದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.



ಈ ಮಹತ್ವದ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು, ಸಂಘಟನೆಯ ಪ್ರತಿನಿಧಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದದವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದು, ಸ್ವಚ್ಛತಾ ಕಾರ್ಯಕ್ಕೆ ಸಾಥ್ ನೀಡಿದರು.










