ಪಟ್ರಮೆ ಬಿ ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪಟ್ರಮೆ: ಪಟ್ರಮೆ ಒಕ್ಕೂಟದ ವತಿಯಿಂದ ಪಟ್ರಮೆ ಬಿ ಶಾಲೆಯಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಶಾಲಾ ಪರಿಸರವನ್ನು ಸ್ವಚ್ಛವಾಗಿ ಹಾಗೂ ಸುಂದರವಾಗಿ ಕಾಪಾಡುವ ಉದ್ದೇಶದಿಂದ ನಡೆದ ಕಾರ್ಯಕ್ರಮದಲ್ಲಿ ಶಾಲಾ ಆವರಣದ ಸ್ವಚ್ಛತೆ ಸೇರಿದಂತೆ ವಿವಿಧ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲಾಯಿತು.

ಸ್ವಚ್ಛತೆಯ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರಾದ ಎಲ್ಲಣ್ಣ ಗೌಡ, ಉಪಾಧ್ಯಕ್ಷೆ ಹರಿಣಾಕ್ಷಿ, ಶಾಲಾ ಶಿಕ್ಷಕಿಯರಾದ ಹೇಮಕುಮಾರಿ ಹಾಗೂ ಶ್ರೀಮತಿ ಧನ್ಯ, ಜ್ಞಾನದೀಪ ಶಿಕ್ಷಕಿ ಸುಶ್ಮಿತಾ ಮತ್ತು ಶಾಲಾ ಪೋಷಕರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಶಾಲಾ ಪರಿಸರದ ಸ್ವಚ್ಛತೆ ಹಾಗೂ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಹಕಾರಿಯಾಯಿತು.

LEAVE A REPLY

Please enter your comment!
Please enter your name here