ಅರಸಿನಮಕ್ಕಿ ಗ್ರಾಮ ಪಂಚಾಯತ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

0

ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಭರತ್ ಕುಮಾರ್ ಎಲ್. ಅವರು ಧ್ವಜಾರೋಹಣ ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸುಧೀರ್ ಕುಮಾರ್, ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ, ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕರು, ಎಸ್‌ಡಿಎಂಸಿ ಅಧ್ಯಕ್ಷರು, ಊರಿನ ನಾಗರಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಂಜೀವಿನಿ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಎಂ.ಬಿ.ಕೆ., ಎಲ್‌ಸಿಆರ್‌ಪಿ ಹಾಗೂ ವಿವಿಧ ಸಖಿಯರು, ಸಂಜೀವಿನಿ ಮತ್ತು ಸ್ತ್ರೀಶಕ್ತಿ ಸಂಘಗಳ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ರಿಕ್ಷಾ ಚಾಲಕರು ಹಾಗೂ ಅಂಗಡಿ ಮಾಲೀಕರು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸ್ವಾತಂತ್ರ್ಯೋತ್ಸವವನ್ನು ಯಶಸ್ವಿಗೊಳಿಸಿದರು.

ಕಾರ್ಯಕ್ರಮದ ಬಳಿಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲಾ ಹಾಗೂ ಅಂಗನವಾಡಿ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.

LEAVE A REPLY

Please enter your comment!
Please enter your name here