ಮಾಯಾ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

0

ಬೆಳಾಲು: ಮಾಯ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಯಿತು

.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಶಶಿಧರ ಶಿಲ್ಪಿ ವಹಿಸಿ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವೀಣ್ ಪಿ, ಮಾಯಾ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಗೌಡ, ದಾನಿಗಳಾದ ವಿಶ್ವನಾಥ್ ಪಿ., ಮಾಯ ಒಕ್ಕೂಟದ ಅಧ್ಯಕ್ಷ ಗಂಗಾಧರ ಸಾಲಿಯಾನ್, ಭಜನಾ ಮಂಡಳಿಯ ಗೌರವಾಧ್ಯಕ್ಷ ಕೃಷ್ಣಪ್ಪ ಗೌಡ, ಮುಖ್ಯ ಶಿಕ್ಷಕ ವಿಠಲ ಎಂ. ಭಜನಾ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಿವಪ್ರಸಾದ್, ಅಂಗನವಾಡಿ ಶಿಕ್ಷಕಿ ರಮ್ಯಾ, ಶಾಲಾ ಸಂಸತ್ತಿನ ಮುಖ್ಯಮಂತ್ರಿ ಮಾ. ಸುಹೈದ್ ಸೇರಿದಂತೆ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ವಿಶ್ವನಾಥ್ ಪಿ. ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಿ, ಅವರ ಶೈಕ್ಷಣಿಕ ಪ್ರಗತಿಗೆ ಶುಭ ಹಾರೈಸಿದರು.ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ಕುರಿತು ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳ ದೇಶಭಕ್ತಿ ಮತ್ತು ಪ್ರತಿಭೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಪ್ರೇಮ, ರಾಷ್ಟ್ರಭಕ್ತಿ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಜಿಪಿಟಿ ಶಿಕ್ಷಕ ಯೋಗೇಶ ಹೆಚ್ ಆರ್ ಅವರ ಕರೆನೀಡಿದರು.

ಸಭಾ ಕಾರ್ಯಕ್ರಮದಲ್ಲಿ 8 ನೇ ತರಗತಿ ವಿದ್ಯಾರ್ಥಿನಿ ತ್ರಿಶಾ ಸ್ವಾಗತಿಸಿ, ವಿರೋಧ ಪಕ್ಷದ ನಾಯಕ ಪ್ರಣಮ್ ವಂದಿಸಿದರೆ, ಶಾಲಾ ಸಂಸತ್ತಿನ ಸಾಂಸ್ಕೃತಿಕ ಮಂತ್ರಿ ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here