ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಶೇ.100 ಸಾಲ ವಸೂಲಾತಿ ಪ್ರಶಸ್ತಿ​

0

ಮುಂಡಾಜೆ:ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಶೇ. 100ರಷ್ಟು ಸಾಲ ವಸೂಲಾತಿ ಮಾಡುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ. ​

ಈ ವಿಶೇಷ ಸಾಧನೆಯನ್ನು ಗುರುತಿಸಿ, ಆ. 22 ರಂದು ನಡೆದ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಸಂಘಕ್ಕೆ ‘ಶೇ.100 ಸಾಲ ವಸೂಲಾತಿ ಸಾಧನಾ ಪ್ರಶಸ್ತಿ’ ನೀಡಿ ಗೌರವಿಸಲಾಯಿತು​.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಸಂಘದ ನಿರ್ದೇಶಕರ ಉಪಸ್ಥಿತಿಯಲ್ಲಿ, ಮುಂಡಾಜೆ ಪ್ಯಾಕ್ಸ್ (PACS) ಅಧ್ಯಕ್ಷರಾದ ಪ್ರಕಾಶ್ ನಾರಾಯಣ ಕೆ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಪ್ರಸನ್ನ ಪರಾಂಜಪೆ ಅವರು ಗಣ್ಯರ ಹಸ್ತದಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು

LEAVE A REPLY

Please enter your comment!
Please enter your name here