ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

0

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಉತ್ತಮ ವ್ಯವಹಾರ ನಡೆಸಿ ಸಾಧನೆ ಮಾಡಿರುವ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಕೆ ಸಂಜೀವ ಪೂಜಾರಿ ಹಾಗೂ ಮುಖ್ಯಕಾರ್ಯನಿರ್ವಹಣಧಿಕಾರಿ ಮಮತಾ ಜಿ ಪ್ರಶಸ್ತಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು. ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಆಡಳಿತ ಮಂಡಳಿ ಸದಸ್ಯರಾದ ಭಾಸ್ಕರ್ ಎಸ್ ಕೋಟ್ಯಾನ್, ಶಶಿಕುಮಾ‌ರ್ ರೈ ಬಿ,ಡಾ ದೇವಿಪ್ರಸಾದ್‌ ಶೆಟ್ಟಿ, ಸದಾಶಿವ ಉಳ್ಳಾಲ್,ಎಂ ಮಹೇಶ್ ಹೆಗ್ಡೆ, ಎಸ್ ಎನ್ ಮನ್ಮಥ ಹಾಗೂ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್ ಎನ್ ರಮೇಶ್‌ ಉಪಸ್ಥಿತರಿದ್ದರು.

ದ ಕ ಜಿಲ್ಲಾ ಮೂರ್ತೆದಾರರ ಮಹಾಮಂಡಲದ ಸಿ ಇ ಒ ಕಿಶೋ‌ರ್ ಹಾಗೂ ಸಂಘದ ಲೆಕ್ಕಿಗ ಶ್ರೀಮತಿ ನಿಶ್ಮಿತಾ ಕೆ, ಶಾಖಾ ವ್ಯವಸ್ಥಾಪಕರಾದ ಶ್ರೀಮತಿ ಅಕ್ಷತಾ ಹಾಗೂ ಕು.ಶ್ರುತಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here