







ಬೆಳ್ತಂಗಡಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ.ಬೆಂಗಳೂರು ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿ ನಿರ್ದೇಶಕರಾಗಿ ಮೈಸೂರು ವಿಭಾಗದಿಂದ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರೂ ಆಗಿರುವ ಪುತ್ತೂರಿನ ಶಶಿ ಕುಮಾರ್ ರೈ ಬಾಲ್ಯೂಟ್ಟು ಅವರು ಚುನಾಯಿತರಾಗಿದ್ದಾರೆ.13 ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮೈಸೂರು ವಿಭಾಗದಿಂದ ಸ್ಪರ್ಧೆ ಮಾಡಿದ್ದ ಶಶಿಕುಮಾರ್ ರೈ ಬಾಲೊಟ್ಟು ಅವರು ಚಲಾವಣೆಯಾದ 18 ಮತಗಳಲ್ಲಿ 18 ಮತಗಳನ್ನೂ ಪಡೆದುಕೊಳ್ಳುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಮೈಸೂರು ವಿಭಾಗದಿಂದ ಮೂರು ಮಂದಿ ಆಯ್ಕೆ: ಆಡಳಿತ ಮಂಡಳಿಯ 13 ನಿರ್ದೇಶಕರಲ್ಲಿ ಮೈಸೂರು ವಿಭಾಗದಿಂದ ಮೂವರು ನಿರ್ದೇಶಕರ ಆಯ್ಕೆಗೆ ಅವಕಾಶವಿತ್ತು. ಮೈಸೂರು ವಿಭಾಗಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗು, ಹಾಸನ, ದ.ಕ., ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಂದ ಒಟ್ಟು 7 ಯೂನಿಯನ್‌ಗಳ ಅಧ್ಯಕ್ಷರು ಕಣದಲ್ಲಿದ್ದರು.ಇದರಲ್ಲಿ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಶಶಿಕುಮಾರ್ ರೈ ಬಾಲ್ಗೊಟ್ಟು, ಚಿಕ್ಕಮಗಳೂರು ಜಿಲ್ಲಾ ಯೂನಿಯನ್ ಯೂನಿಯನ್‌ನಿಂದ ಜಯಶಾಲಿಯಾಗಿದ್ದಾರೆ. ಉಳಿದ ವಿಭಾಗಗಳಿಂದ 10 ಮಂದಿ ಅಭ್ಯರ್ಥಿಗಳು ವಿಜೇತರಾಗಿದ್ದಾರೆ.


ಶ್ರೀಕಂಠಪ್ಪ ಗೌಡ ಹಾಗೂ ಮೈಸೂರು ಜಿಲ್ಲಾ ಸುದ್ದಿ ಬಿಡುಗಡೆ ಬೆಳ್ತಂಗಡಿ 2026ನೇ ಆಗಸ್ಟ್ 27 ರಿಂದ ಸೆಪ್ಟೆಂಬರ್ 027 ತಿಂಗಳ ಬಳಿಕ ಚುನಾವಣೆ: ರಾಜ್ಯ ಸಹಕಾರ ಮಹಾ ಮಂಡಳದ ಆಡಳಿತ ಮಂಡಳಿ ಚುನಾವಣೆಗೆ 7 ತಿಂಗಳ ಹಿಂದೆಯೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿತ್ತು.ಆದರೆ ಹಳೆಯ ಕಾಯ್ದೆ ಅಥವಾ ಹೊಸ ಕಾಯ್ದೆಯಡಿ ಚುನಾವಣೆ ನಡೆಸುವ ಕುರಿತ ಗೊಂದಲದಿಂದ ಜಿ.ಟಿ.ದೇವೇಗೌಡ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದರಿಂದ ಪ್ರಕ್ರಿಯೆ ವಿಳಂಬವಾಗಿತ್ತು.ಹಳೆಯ ಕಾಯ್ದೆಯಡಿ ಚುನಾವಣೆ ನಡೆಸುವುದಕ್ಕೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಬಳಿಕ ಇದೀಗ ಚುನಾವಣೆ ಪ್ರಕ್ರಿಯೆ ಯಶಸ್ವಿಯಾಗಿ ನಡೆದಿದೆ.ಸೆ.4ರಂದು ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಶಶಿಕುಮಾರ್ ರೈ ಬಾಲ್ಯೂಟ್ಟು ಪರಿಚಯ: ಇರ್ದೆ ಗ್ರಾಮದ ಬಾಳ್ಕೊಟ್ಟು ನಿವಾಸಿಯಾಗಿರುವ ಶಶಿಕುಮಾರ್ ರೈ ಅವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ 3ನೇ ಬಾರಿಗೆ ನಿರ್ದೇಶಕರಾಗಿದ್ದು, ಪ್ರಸ್ತುತ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಪುತ್ತೂರು ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ, ಪುತ್ತೂರು ಟಿ.ಎ.ಪಿ.ಸಿ.ಎಂ.ಎಸ್.ನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸುತ್ತಿರುವ ಇವರು ಇರ್ದೆ ಶ್ರೀವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.ಈ ಹಿಂದೆ ಇವರು ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕಿನ ನಿರ್ದೇಶಕರಾಗಿ, ಉಪಾಧ್ಯಕ್ಷರಾಗಿ, 8 ವರ್ಷಗಳ ಕಾಲ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಜನಜಾಗೃತಿ ವೇದಿಕೆಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷರಾಗಿ, ಬೆಂದ್ರತೀರ್ಥ ಅಭಿವೃದ್ಧಿ ಸಮಿತಿಯ ಸಂಚಾಲಕರಾಗಿ, ಪೇರಡ್ಕ ಶಾಲಾಭಿವೃದ್ಧಿ ಸಮಿತಿ ದೇವಸ್ಥಾನದ ಮೊತ್ತೇಸರರಾಗಿ, ನಿಡಳಿ ಶ್ರೀ ಶಾಂತಾದುರ್ಗಾ ದೇವಸ್ಥಾನ ಹಾಗೂ ಪಾಣಾಜೆ ರಣಮಂಗಲ ಶ್ರೀ ಸುಬ್ರಹ್ಮಣೇಶ್ವರ ದೇವಾಲಯದ ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕರಾಗಿ, 23 ವರ್ಷಗಳ ಕಾಲ ಸಾರ್ವಜನಿಕ ಶಾರದೋತ್ಸವ ಸಮಿತಿಯಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ, ಉಪ್ಪಿನಂಗಡಿ ವಿಜಯ-ವಿಕ್ರಮ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪನಾ ಸಮಿತಿ ಕೋಶಾಧಿಕಾರಿಯಾಗಿ, ಪುತ್ತೂರು ತಾಲೂಕು ಬಂಟರ ಸಂಘದ ಅಧ್ಯಕ್ಷರಾಗಿ, ಪಾಣಾಜೆ ಪೂಮಾಣಿ ಕಿನ್ನಿಮಾಣಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು.









