ಬೆಳ್ತಂಗಡಿ: ಪಂಚಾಯತ್ ಕಾರ್ಯದರ್ಶಿಯಿಂದ ಪಿಡಿಒ ಹುದ್ದೆಗೆ ಭಡ್ತಿ – ಶ್ರವಣ್ ಕುಮಾರ್‌ಗೆ ಕೊಳ್ತಿಗೆ ಪಂಚಾಯತಿಗೆ ನಿಯುಕ್ತಿ

0

ಬೆಳ್ತಂಗಡಿ: ತಾಲೂಕಿನಲ್ಲಿ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಶ್ರವಣ್ ಕುಮಾರ್ ಅವರು ಇದೀಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಆಗಿ ಭಡ್ತಿ ಹೊಂದಿದ್ದು, ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತಿಗೆ ನಿಯುಕ್ತಿಗೊಂಡಿದ್ದಾರೆ.

ಇವರು ಈ ಹಿಂದೆ ತಣ್ಣೀರುಪಂತ, ಇಳಂತಿಲ ಗ್ರಾಮ ಪಂಚಾಯತ್‌ನಲ್ಲಿ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಹಾಗೂ ಉಜಿರೆ ಗ್ರಾಮ ಪಂಚಾಯತ್‌ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಗ್ರೇಡ್-1 ಕಾರ್ಯದರ್ಶಿಯಾಗಿ ವರ್ಗಾವಣೆಗೊಂಡು, ಪ್ರಸ್ತುತ ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದೀಗ ಧರ್ಮಸ್ಥಳ ಗ್ರಾಮ ಪಂಚಾಯತ್‌ನ ಗ್ರೇಡ್-1 ಕಾರ್ಯದರ್ಶಿ ಹುದ್ದೆಯಿಂದ ಬಡ್ತಿ ಹೊಂದಿ, ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮ ಪಂಚಾಯತ್‌ನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

LEAVE A REPLY

Please enter your comment!
Please enter your name here