ಬೆಳ್ತಂಗಡಿ: ನ್ಯಾಯಾಲಯದ ಸಿಬ್ಬಂದಿ ಪ್ರದೀಪ್ ಡಿ.ಎಸ್ ನಿಧನ

0

ಬೆಳ್ತಂಗಡಿ: ಕಳೆದ ಎರಡು ವರ್ಷದಿಂದ ಬೆಳ್ತಂಗಡಿ ನ್ಯಾಯಾಲಯದಲ್ಲಿ ಜವಾನನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರದೀಪ್ ಡಿ.ಎಸ್ (45) ಅವರು ಆ.29 ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ಆ.26 ರಂದು ತಮ್ಮ ಸ್ವಂತ ಊರಾದ ಶಿವಮೊಗ್ಗಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ನಾರಾವಿ ಸಮೀಪ ಹೃದಯಾಘಾತಕ್ಕೊಳಗಾಗಿದ್ದರು. ಕೂಡಲೇ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಮೂಲತಃ ಶಿವಮೊಗ್ಗ ಜಿಲ್ಲೆಯವರು.ಮೃತರ ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here