ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

0

ಉಜಿರೆ: ರಕ್ಷಾಬಂಧನ ಹಬ್ಬದ ಅಂಗವಾಗಿ ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ.)ಯಲ್ಲಿ ವಿದ್ಯಾರ್ಥಿಗಳಿಂದ ಸಂಭ್ರಮದಿಂದ ರಕ್ಷಾಬಂಧನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ರಕ್ಷಾಬಂಧನ ಹಬ್ಬದ ಮಹತ್ವ ಹಾಗೂ ಅಣ್ಣ-ತಂಗಿಯರ ಪವಿತ್ರ ಬಾಂಧವ್ಯದ ಕುರಿತು ಮಾತನಾಡಿದರು. ಬಳಿಕ ವಿದ್ಯಾರ್ಥಿಗಳಿಂದ ಸಂಗೀತ ಕಾರ್ಯಕ್ರಮಗಳು ಜರುಗಿದವು. ವಿದ್ಯಾರ್ಥಿಗಳು ಪರಸ್ಪರ ಸಹಪಾಠಿಗಳಿಗೆ ಹಾಗೂ ಸಹೋದರರಿಗೆ ರಕ್ಷೆಯನ್ನು ಕಟ್ಟಿ, ಸಿಹಿ ಹಂಚಿಕೊಳ್ಳುವ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ವಿದ್ಯಾರ್ಥಿನಿಯರಾದ ಧನ್ವಿ ಹಾಗೂ ಅನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here