







ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬೈಪಾಡಿ ಕುರಿಯಾಳ ನಿವಾಸಿ ಭರತ್ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14) ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ. 30 ರಂದು ನಡೆದಿದೆ.


ಬಾಲಕ ಬೆಳ್ತಂಗಡಿಯ ಖಾಸಗಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ. ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಕ ಇಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಂದೆ-ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.









