






ಬೆಳ್ತಂಗಡಿ: ರಾಘವೇಂದ್ರ ಸ್ವಾಮಿಗಳ ಸ್ಮರಣೆ ಮತ್ತು ಆರಾಧನೆಯಿಂದ ಮನಸ್ಸಿನಲ್ಲಿ ಏಕಾಗ್ರತೆ ವೃದ್ಧಿಸುತ್ತದೆ. ರಾಯರ ಸ್ಮರಣೆ ಮಾಡುವ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ.
ರಾಘವೇಂದ್ರ ಸ್ವಾಮಿಗಳ ಅನುಗ್ರಹದಿಂದ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಅಳದಂಗಡಿ ಶ್ರೀ ಸತ್ಯದೇವತಾ ದೇವಸ್ಥಾನದ ಆಡಳಿತ ಮೊಕ್ತೇಸರ ಶಿವ ಪ್ರಸಾದ್ ಅಜಿಲ ಹೇಳಿದರು.ಅವರು ಲಾಯಿಲದ ಶ್ರೀ ರಾಘವೇಂದ್ರ ಮಠದಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಆ. 30 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.



ಬೆಳ್ತಂಗಡಿ ಬೆಸ್ಟ್ ಫೌಂಡೇಷನ್ ಅದ್ಯಕ್ಷ ರಕ್ಷಿತ್ ಶಿವರಾಮ್,ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಶುಭ ಹಾರೈಸಿದರು.ಅಧ್ಯಕ್ಷತೆ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೆರಾಜೆ ವಹಿಸಿ ಮಾತನಾಡಿ, ಬೆಳ್ತಂಗಡಿಯಲ್ಲಿ 37 ವರ್ಷಗಳಿಂದ ರಾಘವೇಂದ್ರ ಆರಾಧನಾ ಮಹೋತ್ಸವ ನಡೆಯುತ್ತಿರುವುದು ಸಂತಸದ ವಿಚಾರ. ಎಲ್ಲರ ಸಹಕಾರ ಹಾಗೂ ಗುರುಗಳ ಆಶೀರ್ವಾದದಿಂದ ಕಾರ್ಯಕ್ರಮಗಳು ಉತ್ತಮವಾಗಿ ನಡೆಯುತ್ತಿವೆ ಎಂದರು.

ಚಿಕ್ಕಬಳ್ಳಾಪುರದ ನಾಗನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಬೇಗೂರು, ಸುಶೀಲಾ ಪ್ರಿಯದರ್ಶೀನಿ ಉಪಸ್ಥಿತರಿದ್ದರು.ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ತುಕರಾಮ್ ಬಿ., ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳು ಮತ್ತು ನಿರ್ಮಿತ್ ಕನ್ಟ್ರಷನ್ ನ ಹರೀಶ್ ಹೆಗ್ಡೆ ಅವರನ್ನು ಸನ್ಮಾನಿಸಲಾಯಿತು. ಪ್ರತಿಷ್ಠಾನದ ಟ್ರಸ್ಟಿ ಡಾ. ಬಿ.ಎ. ಕುಮಾರ ಹೆಗ್ಡೆ ಸ್ವಾಗತಿಸಿದರು. ಸುಧಾಮಣಿ ರಮಾನಂದ ನಿರೂಪಿಸಿದರು. ಪ್ರತಿಷ್ಠಾನದ ಕಾರ್ಯದರ್ಶಿ ವಸಂತ ಸುವರ್ಣ ವಂದಿಸಿದರು.









