ಸೆ.6: ಕಿರಿಯಾಡಿಯಲ್ಲಿ 36ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

0

ಉಜಿರೆ: ಕಿರಿಯಾಡಿ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ ಆಶ್ರಯದಲ್ಲಿ ಸೆ. 6ರಂದು ಕಿರಿಯಾಡಿ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ 36ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯಲಿದೆ.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಶ್ರೀ ಸದಾಶಿವ ದೇವರಿಗೆ ವಿಶೇಷ ಪೂಜೆ ಬಳಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಪುರಂದರ ಎಂ. ಮೈಂದ್ರೇಲ್ ನೆರವೇರಿಸಲಿದ್ದಾರೆ. ನಂತರ ಅಂಗವಾಡಿ ಮಕ್ಕಳಿಂದ ವಿವಿಧ ವಯೋಮಾನನದ ಬಾಲಕ, ಬಾಲಕಿಯರಿಗೆ, ಪುರುಷರಿಗೆ, ಮಹಿಳೆಯರಿಗೆ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು, ಮುದ್ದು ಕೃಷ್ಣ ವೇಷ, ಬಾಲಕೃಷ್ಣ ವೇಷ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಮಲ್ಲಕಂಬ ಸ್ಪರ್ಧೆ ನಡೆಯಲಿದೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಮಂಡಳಿಯ ಅಧ್ಯಕ್ಷ ಸೀತಾರಾಮ ಗೌಡ ಕೂಡಿಗೆ ವಹಿಸಲಿದ್ದಾರೆ. ಶಿವಪ್ರಸಾದ್ ಮಲೆಬೆಟ್ಟು ಮುಖ್ಯ ಅತಿಥಿಯಾಗಿ ಭಾಗವಹಿಸುವರು. ದೇವಸ್ಥಾನದ ಅರ್ಚಕ ರಾಘವೇಂದ್ರ ಹೊಳ್ಳ ಗೌರವ ಉಪಸ್ಥರಿರುವರು. ನಾಟಿ ವೈದ್ಯೆ ಸುಂದರಿ ಅಣ್ಣು ನಾಯ್ಕ ಪಂಚಲಿಕೆ ಇವರಿಗೆ ಸನ್ಮಾನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here