






ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ- ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಮತ್ತು ಸಂತ ತೆರೇಸಾ ಪ್ರೌಢಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಬಾಲಕ- ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾಟ ಆ. 28ರಂದು ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿಯಲ್ಲಿ ನಡೆಯಿತು.
ತಾಲೂಕು ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ರಾಜಶ್ರೀ ಬಿ. ಅವರು ಉದ್ಘಾಟನೆಯನ್ನು ನೆರವೇರಿಸಿ ಆಗಮಿಸಿದ ಸ್ಪರ್ಧಾರ್ಥಿಗಳಿಗೆ ಶುಭಕೋರಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಸಂತ ತೆರೇಸಾ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕಿ ಭಗಿನಿ ತೆರೇಸಿಯಾ ಶೇರಾ ಶುಭಹಾರೈಸಿದರು. ಸಂತ ತೆರೇಸಾ ಹಿರಿಯ ವಿದ್ಯಾರ್ಥಿ ಸಂಘದ ಸಂಯೋಜಕ ನಾರಾಯಣ ಶೆಟ್ಟಿ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ಸುನೀತಾ ಉಪಸ್ಥಿತರಿದ್ದರು.
ತಾಲೂಕಿನ ವಿವಿಧ ಶಾಲೆಯ ದೈಹಿಕ ಶಿಕ್ಷಕರು, ಸ್ಪಧಾರ್ಥಿಗಳು ಭಾಗವಹಿಸಿದ್ದರು. ಸಂತ ತೆರೇಸಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ ಡಿಸೋಜ ಸ್ವಾಗತಿಸಿದರು. ಕನ್ನಡ ಭಾಷಾ ಶಿಕ್ಷಕಿ ಉಮ್ಮಕ್ಕ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕಿ ನಿಶಾ ಪ್ರಫುಲ್ಲಾ ಪಿರೇರಾ ವಂದಿಸಿದರು.

ಪಂದ್ಯಾಟದ ಕೊನೆಯಲ್ಲಿ ವಿಜೇತ ತಂಡಗಳಾದ: 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ: ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ., ದ್ವಿತೀಯ: ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ.


17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ: ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ., ದ್ವಿತೀಯ: ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ.
14ರ ವಯೋಮಾನದ ಬಾಲಕರ ವಿಭಾಗದಲ್ಲಿ ಪ್ರಥಮ: ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ., ದ್ವಿತೀಯ: ಹೋಲಿ ರೆಡೀಮರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ.
14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪ್ರಥಮ: ಸಂತ ತೆರೇಸಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬೆಳ್ತಂಗಡಿ., ದ್ವಿತೀಯ: ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿ.
ಇವರನ್ನು ಬಹುಮಾನ ನೀಡಿ ಗೌರವಿಸಲಾಯಿತು.









