







ಬಳ್ಳಮಂಜ:ಮೂಲ್ಯರ ಯಾನೆ ಕುಂಬಾರರ ಸಂಘ (ರಿ.) ಮಚ್ಚಿನ, ಬಳ್ಳಮಂಜ ಇದರ ವತಿಯಿಂದ ಬಳ್ಳಮಂಜ ಸಮುದಾಯ ಭವನದಲ್ಲಿ ಸಾರ್ವಜನಿಕ ಸಾಮೂಹಿಕ “ಶ್ರೀ ವರಮಹಾಲಕ್ಷ್ಮಿ ಪೂಜೆಯು ಧಾರ್ಮಿಕ ವಿಧಿವಿಧಾನಗಳೊಂದಿಗೆ ಸಂಭ್ರಮದಿಂದ ನೆರವೇರಿತು.



ಅನಂತ ಕೃಷ್ಣ ಭಟ್ ಕುಕ್ಕಿಲ ಇವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ಗಣಹೋಮದೊಂದಿಗೆ ವಿಧ್ಯುಕ್ತವಾಗಿ ಆರಂಭವಾಯಿತು. ನಂತರ ಸಮುದಾಯ ಭವನದಲ್ಲಿ ಸಾರ್ವಜನಿಕ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.ಈ ಧಾರ್ಮಿಕ ಸಮಾರಂಭದಲ್ಲಿ ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಭಜಕರಿಂದ ಸುಶ್ರಾವ್ಯ ಭಜನಾ ಕಾರ್ಯಕ್ರಮವು ಜರುಗಿತು. ಪೂಜೆಯ ನಂತರ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.

ಕಾರ್ಯಕ್ರಮದ ಮುಕ್ತಾಯದ ಬಳಿಕ ಜಿಲ್ಲೆಯ ಸುಪ್ರಸಿದ್ಧ ಕಲಾವಿದರಿಂದ “ದೇವಯಾನಿ” ಎಂಬ ಪುಣ್ಯಪ್ರದ ಕಥಾಭಾಗದ ಪೌರಾಣಿಕ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡು ಕಲಾಪ್ರೇಮಿಗಳನ್ನು ರಂಜಿಸಿತು. ವೃತಧಾರಿಗಳು ಹಾಗೂ ಸುತ್ತಮುತ್ತಲಿನ ಊರಿನ ಮತ್ತು ಪರವೂರಿನ ನೂರಾರು ಭಕ್ತವೃಂದದವರು ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು.









