






ಬೆಳ್ತಂಗಡಿ: ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ವನಜಾ ಅವರು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆಗಿ ಭಡ್ತಿ ಹೊಂದಿದ್ದು, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್‌ಗೆ ನಿಯುಕ್ತಿಗೊಂಡಿದ್ದಾರೆ.


ಇವರು ಈ ಹಿಂದೆ ವೇಣೂರು, ಕುವೆಟ್ಟು, ಗಂಜಿಮಠ ಗ್ರಾಮ ಪಂಚಾಯತ್‌ಗಳಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ವೇಣೂರು ಗ್ರಾಮ ಪಂಚಾಯತ್‌ನಲ್ಲಿ 8 ವರ್ಷ ಸೇವೆ ಸಲ್ಲಿಸಿ ಗ್ರೇಡ್-1 ಕಾರ್ಯದರ್ಶಿ ಹುದ್ದೆಯಿಂದ ಬಡ್ತಿ ಹೊಂದಿ, ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಇವರು ಮೂಲತಃ ಬೆಳ್ತಂಗಡಿ ತಾಲೂಕಿನ ಕರಿಮಣಿಲು ಗ್ರಾಮದ ಪಡ್ಡಂದಡ್ಕದವರು.









