ಕಳೆಂಜದಲ್ಲಿ ಜನನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

0

ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಒಕ್ಕೂಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿ: ಅಧ್ಯಕ್ಷೆ ಭಾರತಿಕಳೆಂಜ, ಸೆ.1: ಕಳೆಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜನನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.), ಕಳೆಂಜ ಇದರ ವಾರ್ಷಿಕ ಮಹಾಸಭೆಯು ಒಕ್ಕೂಟದ ಅಧ್ಯಕ್ಷೆ ಭಾರತಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆಯಿತು.ಹರಿಣಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಸಂಜೀವಿನಿ ಗೀತೆಯನ್ನು ಹಾಡಲಾಯಿತು.

ಗೀತಾ ಅವರು ಸ್ವಾಗತಿಸಿದರು.ಕೃಷಿಯೇತರ ಚಟುವಟಿಕೆಗಳ ವ್ಯವಸ್ಥಾಪಕ ನಿತೀಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ದೊರೆಯುವ ಸಾಲ ಸೌಲಭ್ಯಗಳು ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳಿಂದ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಸಿಬ್ಬಂದಿಯ ಕಾರ್ಯವೈಖರಿಯ ಬಗ್ಗೆಯೂ ವಿವರಿಸಿದರು.

ಒಕ್ಕೂಟದ ಅಧ್ಯಕ್ಷೆ ಭಾರತಿ ಅವರು ವೇದಿಕೆಯಲ್ಲಿದ್ದ ಗಣ್ಯರೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ ಅವರು, ಸಂಜೀವಿನಿ ಯೋಜನೆಯಲ್ಲಿ ಇನ್ನಷ್ಟು ಮಹಿಳೆಯರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಒಕ್ಕೂಟವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಬೇಕು ಎಂದು ಕರೆ ನೀಡಿದರು.

CHO ನಿಖಿತಾ ಅವರು ಸ್ತನ್ಯಪಾನ ಹಾಗೂ ಪೌಷ್ಟಿಕ ಆಹಾರ ಸೇವನೆಯ ಮಹತ್ವದ ಕುರಿತು ಮಾಹಿತಿ ನೀಡಿದರು. MBK ವಿಮಲಾ ಅವರು ಒಕ್ಕೂಟದ ವಾರ್ಷಿಕ ವರದಿಯನ್ನು ವಾಚಿಸುವುದರೊಂದಿಗೆ ಜಮಾ-ಖರ್ಚು ವರದಿಯನ್ನು ಮಂಡಿಸಿದರು. ಸಭೆಯು ವರದಿಗಳಿಗೆ ಅನುಮೋದನೆ ನೀಡಿತು.ನಂತರ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ವಲಯ ಮೇಲ್ವಿಚಾರಕಿ ವೀಣಾಶ್ರೀ ಅವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಕೃಷಿಯೇತರ ಚಟುವಟಿಕೆಗಳ ವ್ಯವಸ್ಥಾಪಕ ನಿತೀಶ್, ವಲಯ ಮೇಲ್ವಿಚಾರಕಿ ವೀಣಾಶ್ರೀ, CHO ನಿಖಿತಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.ಪಶು ಸಖಿ ಯಶೋದಾ ಕಾರ್ಯಕ್ರಮ ನಿರೂಪಿಸಿದರು. ಕೃಷಿ ಸಖಿ ಸುಮಿತ್ರಾ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ವಾರ್ಷಿಕ ಮಹಾಸಭೆ ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here