ಎಸ್‌ಐಟಿಯಲ್ಲಿದ್ದ ಸಬ್‌ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

0

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ತನಿಖೆಗಾಗಿ ರಾಜ್ಯ ಸರಕಾರದಿಂದ ರಚಿಸಲ್ಪಟ್ಟಿರುವ ವಿಶೇಷ ತನಿಖಾ ದಳದಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ವಿನೋದ್ ರೆಡ್ಡಿ ಅವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ಆಗಿ ಕಾರ್ಯ ನಿರ್ವಹಿಸಿ ಬಳಿಕ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.೩೧ರಂದು ಅಮಾನತು ಮಾಡಲಾಗಿದೆ. ವರ್ಗಾವಣೆ ವಿಚಾರವಾಗಿ ಡೀಲಿಂಗ್ ಹಾಗೂ ತಿಂಗಳ ಮಾಮೂಲಿ ವಿಚಾರದಲ್ಲಿ ಮಾತನಾಡಿದ ಆಡಿಯೋ ವೈರಲ್ ಆದ ಬೆನ್ನಲ್ಲಿಯೇ ಉತ್ತರ ಕನ್ನಡ ಎಸ್ಪಿ ದೀಪನ್.ಎಂ.ಎನ್. ಅವರು ಎಸ್‌ಐಗಳಾದ ಕಿರಣ್ ಪಾಟೀಲ್, ಕೃಷ್ಟಾ ಅರಿಕೆರೆ ಮತ್ತು ವಿನೋದ್ ರೆಡ್ಡಿ ಅವರನ್ನು ಪ್ರಾಥಮಿಕ ತನಿಖೆ ನಡೆಸಿ ಅಮಾನತು ಮಾಡಿದ್ದಾರೆ.
ಹಳಿಯಾಳ ಪೊಲೀಸ್ ಠಾಣೆಯಿಂದ ಮುಂಡಗೋಡ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದರೂ ಎಸ್‌ಐಟಿ ರಚನೆಯಾದ ದಿನದಿಂದ ವಿನೋದ್ ರೆಡ್ಡಿ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

LEAVE A REPLY

Please enter your comment!
Please enter your name here