






ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಶಾಲಾ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಶಿಕ್ಷಕರನ್ನು ಮನರಂಜಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ಬಹುಮಾನಗಳನ್ನು ವಿತರಿಸಿ, ಎಲ್ಲಾ ಶಿಕ್ಷಕರನ್ನು ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ರಾಜೇಂದ್ರ ಆಚಾರ್ಯ ಮತ್ತು ಅವರ ಪತ್ನಿಯಾದ ಕುಂಭಶ್ರೀ ಶಾಲಾ ಶಿಕ್ಷಕಿ ವಾಣಿ ರಾಜೇಂದ್ರ ಆಚಾರ್ಯ ಅವರು ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಉಪಹಾರದ ವ್ಯವಸ್ಥೆ ಮಾಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ. ಎಚ್., ಸಂಸ್ಥೆಯ ಸಂಚಾಲಕ ಅಶ್ವಿತ್ ಕುಲಾಲ್, ಪ್ರಾಂಶುಪಾಲ ಶ್ರೀನಿವಾಸ್ ನಾಯ್ಕ್, ಕುಂಭಶ್ರೀ ಶಾಲಾ ಆಡಳಿತ ಅಧಿಕಾರಿ ಮನೋಜ್ ಮುಖ್ಯೋಪಾಧ್ಯಾಯನೀಯರು, ಉಪನ್ಯಾಸಕರು, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿ, ಶಿಕ್ಷಕರಿಗೆ ವಿಶೇಷ ಗೌರವ ಸಲ್ಲಿಸಿದರು.









