






ಗುರುವಾಯನಕೆರೆ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ವೊಂದು ಓವರ್ಟೇಕ್ ಮಾಡುವ ವೇಳೆ ನಿಯಂತ್ರಣ ತಪ್ಪಿ ಗುರುವಾಯನಕೆರೆಯ ಕುಲಾಲ ಮಂದಿರದ ಬಳಿ ರಸ್ತೆ ಬದಿಗೆ ಚಲಿಸಿ ಅಬ್ದುಲ್ ರಹ್ಮಾನ್ ಎಂಬವರ ಮನೆಯ ಅಂಗಳಕ್ಕೆ ನುಗ್ಗಿ ನಿಂತ ಘಟನೆ ನಡೆದಿದೆ.


ಬಸ್ನಲ್ಲಿ ವಿವಿಧ ಕಾಲೇಜುಗಳ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ತುಂಬಿಕೊಂಡಿದ್ದರು ಎನ್ನಲಾಗಿದೆ. ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಚಲಿಸಿ ಮನೆಯ ಅಂಗಳಕ್ಕೆ ನುಗ್ಗಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಬಸ್ನಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ ಎನ್ನಲಾಗಿದೆ.ಘಟನೆಯಿಂದ ಮನೆಯ ಅಂಗಳಕ್ಕೆ ಹಾಗೂ ಬಸ್ಗೆ ಉಂಟಾಗಿರುವ ಹಾನಿಯ ಪ್ರಮಾಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.









