ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಗಳು ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಗಾರ

0

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಎಜುಕೇಷನಲ್ ಟ್ರಸ್ಟ್ (ರಿ.)ನಿಂದ ನಡೆಸಲ್ಪಡುವ ಎಲ್.ಸಿ.ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಸೆ.7ರಂದು ವಾಣಿಜ್ಯ ಸಂಘದ ವತಿಯಿಂದ ಪದವಿ ವಿಭಾಗದ ಬಿ.ಕಾಂ. ವಿದ್ಯಾರ್ಥಿಗಳಿಗೆ ” ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಲಾಯಿತು.

ಸಂಸ್ಥೆಯ ಸಂಯೋಜಕ ಯಶವಂತ್ ಜಿ. ನಾಯಕ್ ಅವರು ಕಾರ್ಯಗಾರವನ್ನು ನಡೆಸಿಕೊಟ್ಟರು.

“ಮೂಲಸೌಕರ್ಯ ಹೂಡಿಕೆ ಟ್ರಸ್ಟ್ – InvITs” ಎಂಬ ವಿಷಯದ ಕುರಿತು ವಿಶೇಷ ಜಾಗೃತಿ ಹಾಗೂ ಶೈಕ್ಷಣಿಕ ಅಧಿವೇಶನವನ್ನು ಆಯೋಜಿಸಿ, ವಿದ್ಯಾರ್ಥಿಗಳಿಗೆ ಆಧುನಿಕ ಹೂಡಿಕೆ ವಿಧಾನಗಳು ಹಾಗೂ ಮೂಲಸೌಕರ್ಯ ಕ್ಷೇತ್ರದಲ್ಲಿನ ಹೂಡಿಕೆಯ ಅವಕಾಶಗಳ ಕುರಿತು ಅರಿವು ಮೂಡಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರಿಸಿ ಮೂಲಸೌಕರ್ಯ ಹೂಡಿಕೆ ಟ್ರಸ್ಟ್‌ಗಳ ಕುರಿತು ವಿದ್ಯಾರ್ಥಿಗಳಿಗೆ ಸರಳವಾಗಿ ಹಾಗೂ ಪ್ರಾಯೋಗಿಕವಾಗಿ ವಿವರಿಸಿದರು.

ಅವರು ರಸ್ತೆ, ಹೆದ್ದಾರಿ, ವಿದ್ಯುತ್ ಪ್ರಸರಣ ವ್ಯವಸ್ಥೆ ಸೇರಿದಂತೆ ವಿವಿಧ ಮೂಲಸೌಕರ್ಯ ಯೋಜನೆಗಳಲ್ಲಿ ಹೂಡಿಕೆ ಮಾಡುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. InvITs ಮೂಲಕ ದೊಡ್ಡ ಪ್ರಮಾಣದ ಮೂಲಸೌಕರ್ಯ ಯೋಜನೆಗಳಲ್ಲಿ ನೇರವಾಗಿ ನಿರ್ವಹಣಾ ಜವಾಬ್ದಾರಿ ವಹಿಸದೆ ಹೂಡಿಕೆದಾರರು ಪಾಲ್ಗೊಳ್ಳಬಹುದಾದ ವಿಧಾನವನ್ನು ವಿವರಿಸಿದರು.

ಅದೇ ರೀತಿ InvITs‌ನ ರಚನೆ, ಕಾರ್ಯವಿಧಾನ, ಪ್ರಯೋಜನಗಳು, ಹೂಡಿಕೆಯ ಅವಕಾಶಗಳು ಮತ್ತು ಸಂಭವನೀಯ ಅಪಾಯಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ವಿವರವಾದ ಮಾಹಿತಿಯನ್ನು ನೀಡಿದರು. ಈ ಅಧಿವೇಶನವು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಜ್ಞಾನವನ್ನು ನೈಜ ಹಣಕಾಸು ಕ್ಷೇತ್ರದೊಂದಿಗೆ ಸಂಪರ್ಕಿಸಲು ಸಹಕಾರಿಯಾಯಿತು. ಕಾರ್ಯಕ್ರಮವು ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ಅರ್ಥಪೂರ್ಣವಾಗಿ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here