ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯಿಂದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕೇಂದ್ರಕ್ಕೆ ಭೇಟಿ​

0

ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿಯವರು ಸೆಪ್ಟೆಂಬರ್ 7ರಂದು ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ ಕುಶಲೋಪಚಾರಿ ವಿಚಾರಿಸಿದರು.​

ಸಂಘದ ವತಿಯಿಂದ ಪಾಲನಾ ಕೇಂದ್ರಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಆಡಳಿತ ಮಂಡಳಿಯವರು ಭರವಸೆ ನೀಡಿದರು. ಈ ಸತ್ಕಾರ್ಯದ ಸಂದರ್ಭದಲ್ಲಿ ಪಾಲನಾ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here