ಗುರುವಾಯನಕೆರೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

0

​ಗುರುವಾಯನಕೆರೆ: ಶ್ರೀ ಅಯ್ಯಪ್ಪಸ್ವಾಮಿ ಸೇವಾ ಟ್ರಸ್ಟ್ (ರಿ.) ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಗುರುವಾಯನಕೆರೆ ಇದರ ವತಿಯಿಂದ, ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು.​

ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟಿನ ಅಧ್ಯಕ್ಷ ರಾಜೇಂದ್ರ ನಾಯರ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುವೆಟ್ಟು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ ಪಾಡ್ಯಾರು (ಸಾಯಿರಾಂ ಫ್ರೆಂಡ್ಸ್) ವಹಿಸಿದ್ದರು.​

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಭಜನಾ ಮಂಡಳಿಯ ಅಧ್ಯಕ್ಷ ಸತ್ಯಪಾಲ ನಾಯರ್ ಹಾಗೂ ಕುವೆಟ್ಟು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಆಶಾಲತಾ ಉಪಸ್ಥಿತರಿದ್ದು ಶುಭ ಹಾರೈಸಿದರು.​ನಂತರ ಜರುಗಿದ ಸಮಾರೋಪ ಸಮಾರಂಭದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ ಹಾಗೂ ಶಟಲ್ ಫೌಂಡೇಶನ್ ಪನೆಜಾಲು ಇದರ ಅಧ್ಯಕ್ಷ ಯತೀಶ್ ಸಿರಿಮಜಲು ಭಜನಾ ಮಂಡಳಿಯ ಪದಾಧಿಕಾರಿಗಳು, ಸರ್ವ ಸದಸ್ಯರು ಹಾಗೂ ಸ್ಥಳೀಯ ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here