






ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ., ಬೆಳ್ತಂಗಡಿ ತಾಲೂಕಿನ ಅರಸಿನಮಕ್ಕಿ ವಲಯದ ಪೆರ್ಲ ಧರಣಿ ಜ್ಞಾನ ವಿಕಾಸ ಕೇಂದ್ರದ ಸಭೆಯು ಪೆರ್ಲ ರಾಜೀವಗಾಂಧಿ ಸಭಾಭವನದಲ್ಲಿ ನಡೆಯಿತು.



ಕೊಡಗು ಜಿಲ್ಲೆಯ ಪಿರಿಯಾಪಟ್ಟಣ ಹಾಗೂ ವಿರಾಜಪೇಟೆ ತಾಲೂಕಿನ ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರು ಕ್ಷೇತ್ರ ಅಧ್ಯಯನ ಪ್ರವಾಸದ ಅಂಗವಾಗಿ ಪೆರ್ಲ ಧರಣಿ ಜ್ಞಾನ ವಿಕಾಸ ಕೇಂದ್ರದ ಸಭೆಗೆ ಆಗಮಿಸಿ, ಕೇಂದ್ರದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು. ಸಭೆಯ ವಿಧಾನ ಹಾಗೂ ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಕೇಂದ್ರದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಉತ್ತಮ ಅನಿಸಿಕೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿವೃತ್ತ ಮೇಲ್ವಿಚಾರಕಿ ರತ್ನಾವತಿ ಅವರು ಸರಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಕೇಂದ್ರ ಕಚೇರಿಯ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಮಲ್ಲಿಕಾ ಅವರು ಜ್ಞಾನ ವಿಕಾಸ ಕೇಂದ್ರದ ಕಾರ್ಯಕ್ರಮಗಳು ಹಾಗೂ ಉದ್ದೇಶಗಳ ಕುರಿತು ವಿವರಿಸಿದರು. ಗೆಳತಿ ಕಾರ್ಯಕ್ರಮದ ಯೋಜನಾಧಿಕಾರಿ ಸಂಧ್ಯಾ ಅವರು ಗೆಳತಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.ಸಭೆಯ ಅಂಗವಾಗಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.









