






ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ, ಮೈರೋಳ್ತಡ್ಕದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆಪ್ಟೆಂಬರ್ 9ರಂದು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.


ಶಾಲಾ ಆವರಣ, ಅಡಿಕೆ ತೋಟ ಹಾಗೂ ಮೈದಾನದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸುವ ಮೂಲಕ ಶಾಲೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಲಾಯಿತು. ಈ ಸಮಾಜಮುಖಿ ಕಾರ್ಯದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಂದರ ಪೂಜಾರಿ, ಗೌರವಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಸೇವಾ ಪ್ರತಿನಿಧಿ ಚಂದ್ರಕಲಾ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಹಾಗೂ ಶಾಲಾ ಪೋಷಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಮುಖ್ಯೋಪಾಧ್ಯಾಯ ಶೀನಪ್ಪ ಧನ್ಯವಾದ ಅರ್ಪಿಸಿದರು.









