ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ ಮತ್ತು ದಾಖಲೆಗಳ ಪರಿಶೀಲನೆ

0

.​ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಲೋಕಾಯುಕ್ತ ವಿಭಾಗದ ಇನ್ಸ್‌ಪೆಕ್ಟರ್ ಶ್ರೀ ಮಂಜುನಾಥ್ ಶಂಕರಹಳ್ಳಿ ಅವರ ನೇತೃತ್ವದ ಅಧಿಕಾರಿಗಳ ತಂಡ ಸೆ. 9 ಭೇಟಿ ನೀಡಿ, ವಿವಿಧ ದಾಖಲೆಗಳನ್ನು ಪರಿಶೀಲಿಸಿತು.

ಅಧಿಕಾರಿಗಳು ಕೇಳಿದ ದಾಖಲೆಗಳನ್ನು ಸಿಬ್ಬಂದಿಗಳು ಸಮರ್ಪಕವಾಗಿ ಹಾಜರುಪಡಿಸಿದ್ದು, ಇದಕ್ಕೆ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಅಲ್ಲದೆ, ದಾಖಲೆಗಳ ನಿರ್ವಹಣೆಯನ್ನು ಇನ್ನಷ್ಟು ವ್ಯವಸ್ಥಿತವಾಗಿ ಹಾಗೂ ಉತ್ತಮ ರೀತಿಯಲ್ಲಿ ಕೈಗೊಳ್ಳುವಂತೆ ಸಿಬ್ಬಂದಿಗೆ ಸಲಹೆ ನೀಡಿದರು.​ಬಳಿಕ ಗ್ರಾಮ ಪಂಚಾಯತ್ ಗ್ರಂಥಾಲಯಕ್ಕೆ ಭೇಟಿ ನೀಡಿದ ತಂಡವು, ಅಲ್ಲಿನ ಉತ್ತಮ ನಿರ್ವಹಣೆ, ಸ್ವಚ್ಛತೆ ಮತ್ತು ವ್ಯವಸ್ಥಿತ ಕಾರ್ಯನಿರ್ವಹಣೆಯನ್ನು ಕೊಂಡಾಡಿ ಮೆಚ್ಚುಗೆ ವ್ಯಕ್ತಪಡಿಸಿತು.

LEAVE A REPLY

Please enter your comment!
Please enter your name here