ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಣೆ ​

0

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ನಡ ಗ್ರಾಮದ ವಿವಿಧ ಶಾಲಾ-ಅಂಗನವಾಡಿ ಮಕ್ಕಳಿಗಾಗಿ ಸಮವಸ್ತ್ರ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮವು ಸೆ. 09ರಂದು ಯಶಸ್ವಿಯಾಗಿ ನಡೆಯಿತು.​

ಕಾರ್ಯಕ್ರಮದಲ್ಲಿ ನಡ ಗ್ರಾಮದ ಒಟ್ಟು 8 ಅಂಗನವಾಡಿ ಕೇಂದ್ರಗಳ 138 ಮಕ್ಕಳು ಹಾಗೂ ಸ್ಥಳೀಯ ಶಾಲೆಯ 67 ಮಕ್ಕಳು ಸೇರಿದಂತೆ ಒಟ್ಟು 205 ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ ನಡ ಸರಕಾರಿ ಕಾಲೇಜಿನಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಸಾಧಕ 4 ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಿ ಗೌರವಿಸಲಾಯಿತು.

​ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯ ಗುತ್ತು ಅವರು ಮಕ್ಕಳಿಗಾಗಿ ಸಮವಸ್ತ್ರ ಹಾಗೂ ಪ್ರೋತ್ಸಾಹಧನವನ್ನು ವಿತರಿಸಿ ಶುಭ ಹಾರೈಸಿದರು.​ಈ ಧಾರ್ಮಿಕ ಹಾಗೂ ಶೈಕ್ಷಣಿಕ ನೆರವಿನ ಕಾರ್ಯಕ್ರಮದಲ್ಲಿ ದೇವಸ್ಥಾನದ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಬಿ. ರಾಜಶೇಖರ ಅಜ್ರಿ, ಪ್ರಮುಖರಾದ ಬಿ. ಮುನಿರಾಜ ಅಜ್ರಿ, ಶಾಲಾ ಮುಖ್ಯೋಪಧ್ಯಾಯರು, ಶಿಕ್ಷಕ ವೃಂದ, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಿದರು

LEAVE A REPLY

Please enter your comment!
Please enter your name here