






ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ವತಿಯಿಂದ 65ನೇ ವರ್ಷದ ಸಾರ್ವಜನಿಕ ಶಿ ಗಣೇಶೋತ್ಸವ ಸೆ. 14ರಿಂದ 18ರವರೆಗೆ ನಡೆಯಲಿದೆ.


ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ಆಚರಿಸಲಾಗುತ್ತಿರುವ ಈ ಗಣೇಶೋತ್ಸವದ ಪ್ರಯುಕ್ತ ಸೆ.14ರಂದು ಬೆಳಿಗ್ಗೆ 10ಕ್ಕೆ ಉದ್ಘಾಟನೆ ನಡೆಯಲಿದ್ದು ಶಿವಶಂಕರ ಪ್ರಭು ಉದ್ಘಾಟನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಹಂಸಿಕಾ ಅವರಿಂದ ಸ್ಯಾಕ್ರೋಫೋನ್ ವಾದನ, ಸೆ.15ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ 7ಕ್ಕೆ ಝೀ ಕನ್ನಡ ಡ್ಯಾನ್ಸ್ ಖ್ಯಾತಿಯ ಬೀಟ್ ರಾಕ್ಸ್ ಡ್ಯಾನ್ಸ್ ಅಕಾಡೆಮಿ ಬೆಳ್ತಂಗಡಿ ಇವರಿಂದ ನೃತ್ಯ ವೈಭವ, ಸೆ.16ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 7ಕ್ಕೆ ಶ್ರೀ ಕೃಷ್ಣ ಮುಖ್ಯಪ್ರಾಣ ಭಜನಾ ಮಂಡಳಿ ಬೆಳ್ತಂಗಡಿ ‘ಇವರಿಂದ ಭಜನಾ ಕಾರ್ಯಕ್ರಮ, ಸೆ.17ರಂದು ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಂಜೆ 6.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 7.30ಕ್ಕೆ ತುಳು ಹಾಸ್ಯಮಯ ನಾಟಕ, ಸೆ.18ರಂದು ಬೆಳಿಗ್ಗೆ 9.30ಕ್ಕೆ 12 ತೆಂಗಿನಕಾಯಿ ಗಣಹೋಮ, ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಂಜೆ 5ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ಶೋಭಾಯಾತ್ರೆಯೊಂದಿಗೆ ಬೆಳ್ತಂಗಡಿಯ ಪುಣ್ಯ ನದಿಯಲ್ಲಿ ಶ್ರೀ ವಿಶ್ವೇಶ್ವರನ ವಿಗ್ರಹ ವಿಸರ್ಜನೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.









