






ಬೆಳ್ತಂಗಡಿ : ಶ್ರೀ ಕ್ಷೇತ್ರ ಶಿಶಿಲದ ಚಂದ್ರಪುರ ಜಿನಮಂದಿರದಲ್ಲಿ ಶ್ರಾವಣ ಶುಕ್ರವಾರದ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.ವಿಶೇಷ ಪೂಜೆ ಹಾಗೂ ಅಭಿಷೇಕಕಾರ್ಕಳ ಜೈನ ಮಠದ ಪರಮ ಪೂಜ್ಯ ಸ್ವಸ್ತಿ ಶ್ರೀ ಲಲಿತಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಶುಭಾಶೀರ್ವಾದ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಈ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.


ಶ್ರೀ ಕ್ಷೇತ್ರ ಚಂದ್ರಪುರದ ಭಗವಾನ್ 1008 ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶ್ರಾವಣ ಶುಕ್ರವಾರದ ಪ್ರಯುಕ್ತ ಭಗವಂತನಿಗೆ ಶ್ರೀಗಂಧ, ಎಳನೀರು, ಹಾಲು ಹಾಗೂ ಚಂದನ ಮುಂತಾದ ದ್ರವ್ಯಗಳಿಂದ ಅಭಿಷೇಕವನ್ನು ನೆರವೇರಿಸಲಾಯಿತು.ವಿಶೇಷ ಹರಕೆ ಹಾಗೂ ಸಮರ್ಪಣೆಕ್ಷೇತ್ರದ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರಿಗೆ 25 ಬಗೆಯ ವಿಶೇಷ ಕಜ್ಜಾಯಗಳನ್ನು ಸಮರ್ಪಿಸಲಾಯಿತು.
ಇದರೊಂದಿಗೆ ಸಾಮೂಹಿಕ ಕುಂಕುಮಾರ್ಚನೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಭಕ್ತಿಭಾವದಿಂದ ಜರುಗಿದವು.ಭಕ್ತರ ಸಕ್ರಿಯ ಭಾಗಿಈ ಪೂಜಾ ಕಾರ್ಯಕ್ರಮದಲ್ಲಿ ಬಸದಿ ಆಡಳಿತ ಮಂಡಳಿಯವರು, ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸದಸ್ಯರು ಹಾಗೂ ವಿವಿಧೆಡೆಯಿಂದ ಆಗಮಿಸಿದ್ದ ಊರ ಮತ್ತು ಪರಊರಿನ ಶ್ರಾವಕ-ಶ್ರಾವಿಕೆಯರು ಬಹುಸಂಖ್ಯೆಯಲ್ಲಿ ಪಾಲ್ಗೊಂಡು ಭಗವಂತನ ಕೃಪೆಗೆ ಪಾತ್ರರಾದರು.









